ಕಾಶ್ಮೀರ ಪಂಡಿತರ ಹತ್ಯಾಕಾಂಡದ ಕುರಿತಾದ ಸಿನಿಮಾ ಇದಾಗಿದ್ದು, ಈಗಾಗಲೇ ಬಿಜೆಪಿ ಶಾಸಕರು ತಮ್ಮ ಕಾರ್ಯಕರ್ತರಿಗೆ ಉಚಿತ ಶೋ ಏರ್ಪಡಿಸಲಾಗಿದೆ. ಈಗ ಈ ಸಿನಿಮಾವನ್ನ ಇಡೀ ಕರ್ನಾಟಕ ಜನತೆಗೆ ತೋರಿಸಬೇಕೆಂದು ಬಿಜೆಪಿ ನಿರ್ಧರಿಸಿದೆ. ಹೀಗಾಗಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನ ಕನ್ನಡಕ್ಕೆ ಡಬ್ಬಿಂಗ್ ಮಾಡಿ, ರಾಜ್ಯದ ಜನತೆ ಮುಂದೆ ಇಡಲು ಚಿಂತನೆ ನಡೆಸಲಾಗಿದೆ.
ಸದ್ಯ ಕನ್ನಡಕ್ಕೆ ಡಬ್ಬಿಂಗ್ ಮಾಡಿ ಪ್ರದರ್ಶನ ಮಾಡುವ ಬಗ್ಗೆ ಆಪ್ತ ಸಚಿವರ ಜೊತೆ ಸಿಎಂ ಕೂಡ ಚರ್ಚೆ ಮಾಡಿದ್ದಾರೆ. ಶೀಘ್ರದಲ್ಲೇ ದಿ ಕಾಶ್ಮೀರ ಫೈಲ್ಸ್ ಕನ್ನಡಕ್ಕೆ ಡಬ್ಬಿಂಗ್ ಆಗಿ ಪ್ರದರ್ಶನಗೊಳ್ಳುವ ಸಾಧ್ಯತೆ ಇದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ