ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಪುಣ್ಕೆದಡಿ ನಿವಾಸಿ ವಿಜಯ್ (22) ಮೃತ ಪಟ್ಟ ಯುವಕನಾಗಿದ್ದಾನೆ.
ವಿಜಯ್ ಮತ್ತಿತರ ಇಬ್ಬರು ನಿರ್ಮಾಣ ಹಂತದಲ್ಲಿರುವ ಕಟ್ಟಡದ ೪ ನೇ ಮಹಡಿಯಲ್ಲಿ ಫ್ಯಾಬ್ರಿಕೇಶನ್ ಕೆಲಸ ಮಾಡುತ್ತಿದ್ದರು. ಮಧ್ಯಾಹ್ನ ಸುಮಾರು 12.30ಕ್ಕೆ ವಿಜಯ್ ಆಕಸ್ಮಿಕವಾಗಿ ಆಯ ತಪ್ಪಿ ಕೆಳಗೆ ಬಿದ್ದಿದ್ದಾರೆ. ತಲೆ ಮತ್ತು ದೇಹದ ಇತರ ಭಾಗಗಳಿಗೆ ಗಂಭೀರ ಗಾಯಗೊಂಡಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಅದಾಗಲೇ ಅವರು ಕೊನೆಯುಸಿರೆಳೆದಿದ್ದರು. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿನಾಲ್ಕೂರು ಗ್ರಾಮದ ಪುಣ್ಕೆದಡಿ ನಿವಾಸಿ ಗುರುವ ಎಂಬವರ ಇಬ್ಬರು ಮಕ್ಕಳಲ್ಲಿ ವಿಜಯ್ ಕಿರಿಯವನು. ಅಕ್ಕ ಅವಿವಾಹಿತಳಾ ಗಿದ್ದು, ಮನೆಯಲ್ಲಿದ್ದಾರೆ. ತಂದೆ, ತಾಯಿ ಇಬ್ಬರೂ ಅನಾರೋಗ್ಯದಿಂದಿದ್ದು ವಿಜಯ್‌ನ ದುಡಿಮೆಯೇ ಕುಟುಂಬಕ್ಕೆ ಆಧಾರವಾಗಿದ್ದನು ಎನ್ನಲಾಗಿದೆ.
ಕಳೆದ ಬಾರಿಯಷ್ಟೆ ಬಂಟ್ವಾಳ ಸರಕಾರಿ ಕಾಲೇಜಿನಲ್ಲಿ ಪದವಿ ಮುಗಿಸಿದ್ದ ವಿಜಯ್ ಕಟ್ಟಡಗಳಲ್ಲಿ ಪೈಂಟಿಂಗ್ ಕೆಲಸಕ್ಕೆ ಸೇರಿದ್ದ. ಅವರ ಮನೆ ತೀರಾ ಶಿಥಿಲಗೊಂಡಿದ್ದು, ದುರಸ್ತಿ ನಡೆಸಲು ಸಿದ್ಧತೆ ನಡೆಸಿದ್ದ ಎಂದು ತಿಳಿದು ಬಂದಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ