ಬೆಂಗಳೂರು: ಪ್ರತಿಪಕ್ಷ ನಾಯಕ ಸ್ಥಾನ ಕೈತಪ್ಪಿರುವುದರಿಂದ ಬೇಸರಗೊಂಡು ಕಾಂಗ್ರೆಸ್ನಿಂದ ದೂರ ಸರಿಯುವುದಾಗಿ ಹೇಳುತ್ತಿದ್ದ ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬೆಳಿಗ್ಗೆ 11 ಗಂಟೆಗೆ, ವಿಧಾನಸೌಧದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾದ ಇಬ್ರಾಹಿಂ, ರಾಜೀನಾಮೆ ಸಲ್ಲಿಸಿದರು. ಪರಿಷತ್ ಸ್ಥಾನಕ್ಕೆ ಇಬ್ರಾಹಿಂ ಸಲ್ಲಿಸಿದ ರಾಜೀನಾಮೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದ್ದಾರೆ. ಕಳೆದ ಹಲವು ತಿಂಗಳಿಂದ ಕಾಂಗ್ರೆಸ್ ಪಕ್ಷದ ಮೇಲೆ ಮುನಿ ಸಿಕೊಂಡಿದ್ದ ಅವರು ಜೆಡಿಎಸ್ ಸೇರುವ ಇಂಗಿತ ವ್ಯಕ್ತಪಡಿಸಿದ್ದರು. ಈ ಸಂಬಂಧ ಜೆಡಿಎಸ್ ನಾಯಕರಾದ ಎಚ್.ಡಿ.ಕುಮಾರ ಸ್ವಾಮಿ ಮತ್ತು ದೇವೇಗೌಡರನ್ನೂ ಸಂಪರ್ಕಿಸಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ