Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಸಖಿ ಒನ್ ಸ್ಟಾಫ್ ಕೇಂದ್ರ: 335 ನೊಂದ ಮಹಿಳೆಯರಿಗೆ ಅಗತ್ಯ ನೆರವು16-3-2022

ಸಖಿ ಒನ್ ಸ್ಟಾಫ್ ಕೇಂದ್ರ: 335 ನೊಂದ ಮಹಿಳೆಯರಿಗೆ ಅಗತ್ಯ ನೆರವು

 ‘ಸಖಿ’ ಒನ್ ಸ್ಟಾಪ್ ಸೆಂಟರ್ ಕೊಡಗು ಜಿಲ್ಲೆಯಲ್ಲಿ ದಿನದ 24 ಗಂಟೆ ಕರ್ತವ್ಯ ನಿರ್ವಹಿಸುತ್ತಿದ್ದು, ನೊಂದ ಮಹಿಳೆಯರಿಗೆ ಸೂಕ್ತ ನ್ಯಾಯ ದೊರಕಿಸುವಲ್ಲಿ ಯಶಸ್ವಿಯಾಗುತ್ತಿದೆ. ಇದಕ್ಕ್ಕೆ ಉದಾಹರಣೆ ಕೊಡಗು ಜಿಲ್ಲೆಯಲ್ಲಿ ‘ಸಖಿ’ ಒನ್ ಸ್ಟಾಪ್ ಸೆಂಟರ್ ನವಂಬರ್-2019 ರಲ್ಲಿ ಆರಂಭವಾಗಿದ್ದು, ಪ್ರಾರಂಭದಲ್ಲಿ ಏಕ ಅಂಕಿಯಲ್ಲಿ ದಾಖಲೆಯಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಸಾರ್ವಜನಿಕರಿಂದ ಸ್ಪಂದನೆಗೆ ಒಳಪಟ್ಟು ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇವೆ ಪಡೆದುಕೊಳ್ಳುತ್ತಿದ್ದಾರೆ. 

ಮಹಿಳಾ ದೌರ್ಜನ್ಯಗಳಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಮತ್ತು ವಿವಿಧ ಇಲಾಖೆಗಳ ಸಹಕಾರದೊಂದಿಗೆ ‘ಸಖಿ’ ಒನ್ ಸ್ಟಾಪ್ ಸೆಂಟರ್- ವಿವಿಧ ಅರಿವು ಕಾರ್ಯಕ್ರಮ/ ಕಾರ್ಯಾಗಾರಗಳನ್ನು ಹಮ್ಮಿಕೊಂಡಿದೆ. ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ತಮಗಾದ ಅನ್ಯಾಯದ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದ್ದು- ಮಹಿಳಾ ಅತ್ಯಾಚಾರ, ಕೌಟುಂಬಿಕ ದೌರ್ಜನ್ಯ, ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ, ಪೋಕ್ಸೋ ಪ್ರಕರಣ, ಕಾಣೆಯಾದ ಪ್ರಕರಣ, ಇತರೆ ನಿರ್ಗತಿಕ ಮಹಿಳೆಯರಿಗೆ ಪುನರ್ವಸತಿ ಸೌಲಭ್ಯಕ್ಕೆ ಸಂಬಂಧಿಸಿದಂತೆ 2019-20ನೇ ಸಾಲಿನಲ್ಲಿ 44 ಪ್ರಕರಣಗಳು, 2020-21 ನೇ ಸಾಲಿನಲ್ಲಿ 119 ಪ್ರಕರಣಗಳು ಹಾಗೂ ಪ್ರಸ್ತುತ 2021-22 ನೇ ಸಾಲಿನಲ್ಲಿ 172 ಪ್ರಕರಣಗಳು ದಾಖಲಾಗಿದ್ದು, ಕೊಡಗು ಜಿಲ್ಲೆಯಲ್ಲಿ ‘ಸಖಿ’ ಒನ್ ಸ್ಟಾಪ್ ಸೆಂಟರ್ ಪ್ರಾರಂಭವಾದಾಗಿನಿಂದ ಇದುವರೆಗೆ 335 ನೊಂದ ಮಹಿಳೆಯರಿಗೆ ವೈದ್ಯಕೀಯ ನೆರವು, ಆಪ್ತ ಸಮಾಲೋಚನೆ, ಕಾನೂನು ನೆರವು, ಪೊಲೀಸ್ ನೆರವು ಹಾಗೂ ಮಹಿಳೆಯರಿಗೆ ತಾತ್ಕಾಲಿಕ ಆಶ್ರಯ ಹೀಗೆ ವಿವಿಧ ಹಂತಗಳಲ್ಲಿ ಸಹಕಾರ ನೀಡುತ್ತಾ ಮಹಿಳೆಯರ ಮೇಲಿನ ದೌರ್ಜನ್ಯಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದೆ. 


      ‘ಸಖಿ’ ಒನ್ಸ್ಟಾಪ್ ಸೆಂಟರ್ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಹಲವಾರು ಮಹಿಳೆಯರಿಗೆ ನ್ಯಾಯ ಒದಗಿಸುವುದರ ಜೊತೆಗೆ ಬೀದಿ ಬದಿಯಲ್ಲಿದ್ದ ಅನಾಥ ಮಹಿಳೆಯರಿಗೆ ರಾಜ್ಯದ ವಿವಿಧ ಸಂಸ್ಥೆಗಳನ್ನು ಗುರುತಿಸಿ ಪುನರ್ವಸತಿ ಸೌಲಭ್ಯ ಕಲ್ಪಿಸುವಲ್ಲಿ ಯಶಸ್ವಿಯಾಗಿರುವ ಹಲವಾರು ಪ್ರಕರಣಗಳು ದಾಖಲಾಗಿವೆ. 
 ‘ಸಖಿ’ ಒನ್ ಸ್ಟಾಪ್ ಸೆಂಟರ್ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಕೊಡಗು ಜಿಲ್ಲೆಯಲ್ಲಿ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸುತ್ತಿದೆ. ‘ಸಖಿ’ ಒನ್ ಸ್ಟಾಪ್ ಸೆಂಟರ್ ಯೋಜನೆಯು ನೊಂದ ಮಹಿಳೆ ಮತ್ತು ಮಕ್ಕಳಿಗೆ ಒಂದೇ ಸೂರಿನಡಿ ಹಲವು ಸೇವೆಗಳನ್ನು ನೀಡಿ, ಯಶಸ್ವಿಯಿಂದ ನಡೆಯುತ್ತಿದ್ದು ಸಂಸ್ಥೆ ಮತ್ತು ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ಸಿಬ್ಬಂದಿಗಳ ಕುರಿತು ಅಪಪ್ರಚಾರ ಮಾಡುತ್ತಿರುವುದು ಸರಿಯಲ್ಲ.
      ಅಪಪ್ರಚಾರಕ್ಕೆ ಕಿವಿಗೊಡದಿರಲು ಮನವಿ: ವಾಟ್ಸಪ್ಗ್ರೂಪ್ ಗಳಲ್ಲಿ ‘ಸಖಿ’ ಒನ್ ಸ್ಟಾಪ್ ಸೆಂಟರ್ ಮತ್ತು ಅಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯ ಕುರಿತು ತಪ್ಪು ಮಾಹಿತಿ ನೀಡಿದ್ದು, ಈ ಬಗ್ಗೆ ಸಂಬಂಧಿಸಿದವರಿಗೆ ದೂರವಾಣಿ ಕರೆ ಮಾಡಿದರೆ ಪ್ರತಿಕ್ರಿಯಿಸುತ್ತಿಲ್ಲ.  
      ಆದರೂ ಕಚೇರಿಗೆ ಆಗಮಿಸಿ ಮಾಹಿತಿ ನೀಡುವಂತೆ ವಾಟ್ಸಪ್ ಮುಖಾಂತರ ತಿಳಿಸಲಾಗಿದೆ. ಆದರೆ ಇದುವರೆಗೆ ಕಚೇರಿಗೆ ಮಾಹಿತಿ ನೀಡಿರುವುದಿಲ್ಲ. ಮಾರ್ಚ್, 07 ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪ ನಿರ್ದೇಶಕರು ‘ಸಖಿ’ ಒನ್ ಸ್ಟಾಪ್ ಸೆಂಟರ್ಗೆ ಭೇಟಿ ನೀಡಿ ಸಿಬ್ಬಂದಿಗಳ ಸಭೆ ನಡೆಸಿದ್ದು, ವಾಟ್ಸಪ್ ಗ್ರೂಪಿನಲ್ಲಿ ಬಂದ ವಿಚಾರಗಳ ಬಗ್ಗೆ ಸಿಬ್ಬಂದಿಗಳೊಂದಿಗೆ ಚರ್ಚಿಸಲಾಯಿತು. 
       ಸಿಬ್ಬಂದಿಗಳಿಂದ ಕೇಂದ್ರದ ಆಡಳಿತಾಧಿಕಾರಿ ಇವರ ಮೇಲೆ ಯಾವುದೇ ಪ್ರತಿಕೂಲ ಷರಾ ಸಭೆಯಲ್ಲಿ ದಾಖಲು ಆಗಿರುವುದಿಲ್ಲ. ‘ಸಖಿ’ ಒನ್ ಸ್ಟಾಪ್ ಸೆಂಟರ್ ಎಲ್ಲಾ ದಾಖಲೆಗಳನ್ನು ಪರಿಶೀಲಿಸಲಾಗಿ ಕ್ರಮಬದ್ಧವಾಗಿರುವುದು ಕಂಡುಬಂದಿದೆ.  
       ಈ ಪತ್ರಿಕೆಯಲ್ಲಿ ಬಂದ ಅಂಶಗಳು ವೈಯಕ್ತಿಕ ದೃಷ್ಟಿಕೋನ ಹೊಂದಿದ್ದು, ಯಾವುದೇ ವ್ಯಕ್ತಿ ಸರ್ಕಾರದ/ ಇಲಾಖೆಯ ಯೋಜನೆಗಳ ಅನುಷ್ಠಾನ ಮತ್ತು ಫಲಾನುಭವಿಗಳ ಹಂತದಲ್ಲಿ ಪರಿಣಾಮಕಾರಿಯಾಗಿ ತಲುಪಿಸುವ ವಿಧಾನದಲ್ಲಿ ಯಾವುದೇ ಲೋಪ ದೋಷಗಳು ಕಂಡುಬಂದಲ್ಲಿ ಆಥವಾ ಅನುಷ್ಠಾನ ಅಧಿಕಾರಿ/ ಸಿಬ್ಬಂದಿಗಳಿಂದ ಲೋಪವಾಗಿದೆ ಎಂದು ಕಂಡುಬಂದಲ್ಲಿ ಸಂಬಂಧಿಸಿದ ದಾಖಲೆಗಳೊಂದಿಗೆ ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಡಿಕೇರಿ ಇವರ ಗಮನಕ್ಕೆ ತಂದು ಹಾಜರುಪಡಿಸುವುದು. 
 ಇಲಾಖಾ ಜಿಲ್ಲಾ ಅಧಿಕಾರಿಗಳಾದ ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಡಿಕೇರಿ ಇವರ ಗಮನಕ್ಕೆ ತರದೇ ನೇರವಾಗಿ ಮಾಧ್ಯಮಗಳಲ್ಲಿ ಆರೋಪ ಮಾಡುತ್ತಿರುವುದರಿಂದ ಸರ್ಕಾರದ ಹಲವು ಜನಪರ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ತಪ್ಪು ದೃಷ್ಠಿಕೋನ ಮೂಡಿದಂತಾಗುತ್ತದೆ. ಇದರಿಂದ ಸರ್ಕಾರದ ಯೊಜನೆಗಳನ್ನು ಅನುಷ್ಠಾನಗೊಳಿಸಲು ತೊಂದರೆಯಾಗುತ್ತದೆ. ಜಿಲ್ಲಾ ಮಟ್ಟದ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರದೇ ನೇರವಾಗಿ ಅಪ ಪ್ರಚಾರ ಮಾಡುವುದು ಸರಿಯಲ್ಲ. ಯಾವುದೇ ಸಮಸ್ಯೆ ಉಂಟಾದಲ್ಲಿ ಇಲಾಖೆಯನ್ನು ಸಂಪರ್ಕಿಸಿ ಸೂಕ್ತ ದಾಖಲಾತಿಗಳನ್ನು ಸಲ್ಲಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಸೂಕ್ತವಾಗಿದೆ.
ಇದಲ್ಲದೇ ಅನಾವಶ್ಯಕವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ಯೋಜನೆಗಳ ಬಗ್ಗೆ, ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಅಧಿಕಾರಿ/ ಸಿಬ್ಬಂದಿಗಳ ಮೇಲೆ ಅವಹೇಳನಕಾರಿ ಪ್ರತಿಕ್ರಿಯೆ ನೀಡುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಮುಂದಿನ ದಿನಗಳಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು. 
 ಸರ್ಕಾರದ ಯೋಜನೆಗಳ ಬಗ್ಗೆ ಅಪಪ್ರಚಾರಕ್ಕೆ ಕಿವಿಗೊಡದೇ ಸರ್ಕಾರದ ಬಹುಮೂಲ್ಯ ಯೋಜನೆಗಳ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರಾದ ಎಂ.ಮುದ್ದಣ್ಣ ಅವರು ಕೋರಿದ್ದಾರೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo