ಅದೃಷ್ಟವಶಾತ್ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮರ ಬೀಳುತ್ತಿದ್ದಂತೆ ಚಾಲಕ ಪುರುಷೋತ್ತಮ ಲಾರಿಯಿಂದ ಕೆಳಗೆ ಜಿಗಿದಿದ್ದಾರೆ. ಶಾಲೆ-ಕಾಲೇಜು ಸಂಪರ್ಕಿಸುವ ಪ್ರಮುಖ ರಸ್ತೆ ಇದಾಗಿದ್ದು, ಬಿಎಸ್ಎನ್ಎಲ್ ಆವರಣದಿಂದ ಕಂಪೌಂಡ್ ಸಮೇತ ಮರ ಉರುಳಿದೆ.
ಪಾಂಡೇಶ್ವರ ಅಗ್ನಿಶಾಮಕ ದಳದಿಂದ ಮರ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ. ಮರ ಉರುಳಿದ್ದರಿಂದ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ.
ನಗರದಲ್ಲಿನ ಅವೈಜ್ಞಾನಿಕ ಸ್ಮಾರ್ಟ್ ಸಿಟಿಯ ಕಾಮಗಾರಿಯಿಂದಾಗಿ ಈ ಅವಾಂತರ ಸೃಷ್ಟಿಯಾಗಿದೆ ಎಂದು ಆರೋಪಿಸಲಾಗಿದೆ. ಬೆಳಿಗ್ಗೆ ನಗರದಲ್ಲಿ ಸುರಿದ ಅಕಾಲಿಕ ಮಳೆಯಿಂದ ರಸ್ತೆಯ ನೀರು ಅಂಗಡಿಯೊಳಗೆ ನುಗ್ಗಿದೆ. ಗಲ್ಲಿಟ್ರಾಪ್ ಮೂಲಕ ಚರಂಡಿಗೆ ಸೇರಬೇಕಾಗಿದ್ದ ಮಳೆ ನೀರು ಅಂಗಡಿಗೆ ನುಗ್ಗಿದ್ದು, ಕಾಮಗಾರಿ ಬಗ್ಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಂಗಡಿಯಲ್ಲಿ ಮೊಣಕಾಲಿನವರೆಗೆ ನೀರು ನಿಂತಿದ್ದು, ಅಂಗಡಿಯವರು ಬಕೆಟ್ ಮೂಲಕ ನೀರು ಹೊರ ಚೆಲ್ಲಿಲುತ್ತಿದ್ದ ದೃಶ್ಯ ಕಂಡು ಬಂತು. ಗಿಫ್ಟ್, ಫ್ಯಾನ್ಸಿ ಐಟಂಗಳು ನೀರಿನಲ್ಲಿ ಮುಳುಗಿದ್ದು, ಅಪಾರ ಪ್ರಮಾಣದ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ