ನವದೆಹಲಿ : ದೇಶಾದ್ಯಂತ ಕೊರೊನಾ ಪಾಸಿಟಿವಿಟಿ ಹೆಚ್ಚಾಗುತ್ತಿದೆ . ಮತ್ತೆ ಕೊರೊನಾ ಸೋಂಕು ಜನತೆಯನ್ನು ಭೀಕರವಾಗಿ ಕಾಡುವ ಲಕ್ಷಣಗಳು ಕಾಣುತ್ತಿವೆ . ಈ ಹಿನ್ನೆಲೆಯಲ್ಲಿ ಬರುವ ಬುಧವಾರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಲಿದ್ದಾರೆ .
ವಿಡಿಯೋ ಕಾನ್ನರೆನ್ಸ್ ಮೂಲಕ ನಡೆಯಲಿರುವ ಈ ಸಭೆಯಲ್ಲಿ ದೇಶದ ಕೊರೋನಾ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ಅವರು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿವೆ .
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ