ಮಾಬುಕಳ : ಕಾರು ಮತ್ತು ಲಾರಿಯ ನಡುವೆ ಭೀಕರ ಅಪಘಾತ ನಡೆದ ಘಟನೆ ಮಾಬುಕಳ ಸೇತುವೆಯ ಸಮೀಪ ಇಂದು ಸಂಜೆ ನಡೆದಿದೆ.
ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಕಾರು ಚಾಲಕ ಅತಿ ವೇಗದಿಂದ ಕುಂದಾಪುರದಿಂದ ಉಡುಪಿಯತ್ತ ಕಾರು ಚಲಾಯಿಸಿಕೊಂಡು ಬರುತ್ತಿದ್ದು ನಿಯಂತ್ರಣ ಸಿಗದೆ ರಸ್ತೆ ವಿಭಜಕ ದಾಟಿ ಕುಂದಾಪುರದತ್ತ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿದುಬಂದಿದೆ.
ಇನ್ನು ಈ ಅಪಘಾತದಿಂದ ಕಾರು ನಜ್ಜುಗುಜ್ಜಾಗಿದ್ದು
ಕಾರಿನ ಚಾಲಕನ ಕೈ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಈ ಕುರಿತು ಬ್ರಹ್ಮಾವರ ಆರಕ್ಷಕ ಠಾಣೆಯ ಸಿಬ್ಬಂದಿಗಳು ಘಟನ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿದುಬಂದಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ