ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಸಂಜೆಯಿಂದ ಭಾರಿ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ನಾಳೆ ಶುಕ್ರವಾರ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡದಲ್ಲಿ ಬೆಳಗ್ಗೆ 8:30 ರವರೆಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು ಆದರೆ ಜಿಲ್ಲಾಡಳಿತ ನಾಳೆ ಸಹ ಅಸಹಜವಾಗಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಇರುವ ಕಾರಣ ಸಾರ್ವಜನಿಕ ಹಿತಾಸಕ್ತಿಯನ್ನು ಪರಿಗಣಿಸಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು, ಪಿಯು ಮತ್ತು ಪದವಿ ಕಾಲೇಜುಗಳು ಶುಕ್ರವಾರ ರಜೆ ಘೋಷಿಸಲು ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಗುರುವಾರ ಸುರಿದ ಭಾರಿ ಮಳೆಯಿಂದಾಗಿ ಮಂಗಳೂರು ನಗರದ ಹಲವೆಡೆ ರಸ್ತೆಗಳಲ್ಲಿ ನೀರು ನಿಂತು ಜನ ಜೀವನ ಅಸ್ತವ್ಯಸ್ತವಾಗಿತ್ತು. ಹಲವೆಡೆ ಭೂ ಕುಸಿತವಾಗಿರುವ ಬಗ್ಗೆ ವರದಿಯಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ