Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ರಾಜ್ಯದಲ್ಲಿ ಕರೋನ ಸೋಂಕು ಹೆಚ್ಚಳ : ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ತಾಂತ್ರಿಕ ಸಮಿತಿ ಸಲಹೆ


 ಬೆಂಗಳೂರು: ರಾಜ್ಯದಲ್ಲಿ ದಿನೇದಿನೆ ಕೊರೊನಾ  ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ಮಾಸ್ಕ್  ಧರಿಸದಿದ್ದರೆ ದಂಡ ವಿಧಿಸಲು ಸರ್ಕಾರಕ್ಕೆ ಕೊರೊನಾ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು ಮಾಡಿದೆ.



ಮಾಸ್ಕ್​ ದಂಡದ ಬಗ್ಗೆ ಈ ವಾರದಿಂದಲೇ ಜಾರಿಗೆ ಬರುವ ನಿರೀಕ್ಷೆ ಇದೆ. ಆರೋಗ್ಯ ಇಲಾಖೆ ವರದಿ ಸಂಜೆ ವೇಳೆಗೆ ಸರ್ಕಾರಕ್ಕೆ ತಲುಪಲಿದೆ. ವರದಿ ಸಲ್ಲಿಸಿದ ನಂತರ ಮಾಸ್ಕ್​ ಧರಿಸದಿದ್ದರೆ ದಂಡದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. 


ದಂಡದ ಪ್ರಸ್ತಾವನೆ ಕುರಿತು ಸರ್ಕಾರದ ಮಟ್ಟದಲ್ಲಿ ಸಭೆ ನಡೆದಿದ್ದು, ಸಭೆ ಬಳಿಕ ಮಾಸ್ಕ್ ದಂಡದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಆರೋಗ್ಯ ‌ಇಲಾಖೆಯ ಆಯುಕ್ತ ಡಿ.ರಂದೀಪ್ ಹೇಳಿದ್ದಾರೆ.

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo