ಮಂಗಳೂರು/ ಉಡುಪಿ: ಮುಂಗಾರು ಬಿರುಸು ಪಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಬುಧವಾರ ಉತ್ತಮ ಮಳೆಯಾಗಿದೆ.
ಮಂಗಳವಾರ ಮಧ್ಯರಾತ್ರಿ ಆರಂಭಗೊಂಡ ಮಳೆ ಬುಧವಾರವೂ ಮುಂದುವರಿದಿತ್ತು. ಮಧ್ಯಾಹ್ನ ಮತ್ತು ರಾತ್ರಿ ವೇಳೆ ಮಳೆ ಬಿರುಸು ಪಡೆದಿತ್ತು. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜೂನ್.30 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಜು. 1ರಿಂದ 3ರ ವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಬಿರುಸಿನ ಮಳೆ, ಗಾಳಿ ಇರಲಿದ್ದು, ಸಮುದ್ರದ ಅಬ್ಬರ ಹೆಚ್ಚಿರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಬುಧವಾರ ಬಿಟ್ಟುಬಿಟ್ಟು ಮಳೆಯಾಗಿದೆ. ಹೆಬ್ರಿ, ಕುಂದಾಪುರ, ಕಾರ್ಕಳ ಭಾಗದಲ್ಲಿ ಹೆಚ್ಚು ಮಳೆಯಾಗಿದೆ. , , ಬೈಂದೂರು, ಬ್ರಹ್ಮಾವರ, ಕಾರ್ಕಳ, ಕಾಪು, ಭಾಗದಲ್ಲಿ ಮಳೆಯಾಗಿದೆ. ಗಾಳಿ, ಮಳೆಯಿಂದಾಗಿ ಮುಂಡ್ಕೂರು ಭಾಗದಲ್ಲಿ ಮನೆಗೆ ಹಾನಿ ಸಂಭವಿಸಿದೆ.
ಐ.ಎಂ.ಡಿ ಮಾಹಿತಿಯಂತೆ ಮಂಗಳೂರಿನಲ್ಲಿ ಬುಧವಾರ 26.8 ಡಿ.ಸೆ. ಗರಿಷ್ಠ ಉಷ್ಣಾಂಶ ದಾಖಲಾಗಿ ವಾಡಿಕೆಗಿಂತ 3 ಡಿ.ಸೆ. ಕಡಿಮೆ ಇತ್ತು. 22.9 ಡಿ.ಸೆ. ಕನಿಷ್ಠ ಉಷ್ಣಾಂಶ ದಾಖಲಾಗಿತ್ತು
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ