ಬ್ರಹ್ಮಾವರ: ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಮೆಮೊರಿಯಲ್ ನ್ಯಾಶನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೊತ್ತರ ಅಧ್ಯಯನ ಕೇಂದ್ರದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಜೂನ್.30 ರಂದು ಬ್ರಹ್ಮಾವರದ ಬಂಟರ ಭವನದಲ್ಲಿ 'ವಿಶಿಷ್ಟ' ಎಂಬ ಉದ್ಯಮ ಮೇಳ ನಡೆಯಲಿದೆ.
ಸಚಿವ ಕೋಟ ಶ್ರೀನಿವಾಸ ಪೂಜಾರಿ ಮೇಳ ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 9:30ರಿಂದ ಸಂಜೆ 4:00ಯ ವರೆಗೆ ವಿದ್ಯಾರ್ಥಿಗಳು ತಯಾರಿಸಿದ ಖಾದ್ಯ ಹಾಗೂ ಇತರ ಉತ್ಪನ್ನಗಳ ಮಹಾ ಮಾರಾಟ ಮೇಳ ನಡೆಯಲಿದ್ದು ಹಲವಾರು ಯಶಸ್ವಿ ಉದ್ಯಮಿಗಳು ಪಾಲ್ಗೊಂಡು ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ವಿದ್ಯಾರ್ಥಿಗಳು ಉದ್ಯಮಶೀಲತೆಯ ಅನುಭವ ಹೊಂದಲು ಸಹಕಾರಿ ಆಗುವಂತೆ ಒಟ್ಟು 8 ಮಳಿಗೆಗಳನ್ನು ತೆರೆದು ಅದರಿಂದ ಗಳಿಸುವ ಲಾಭಾಂಶವನ್ನು ಸಾಮಾಜಿಕ ಕಾರ್ಯಕ್ಕೆ ಬಳಸಲು ನಿರ್ಧರಿಸಲಾಗಿದ್ದು ಈ ಮೂಲಕ ವಿದ್ಯಾರ್ಥಿಗಳಲ್ಲಿ ಮಾರಾಟ ಕೌಶಲದ ಜೊತೆ ಜೊತೆಗೆ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವುದು ಈ ಕಾರ್ಯಕ್ರಮದ ಉದ್ದೇಶವಾಗಿರುತ್ತದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ