Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ:- ಪುತ್ತೂರಿನಾದ್ಯಂತ 144 ಸೆಕ್ಷನ್ ಜಾರಿ27-7-2022


 ಪುತ್ತೂರು : ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಪ್ರವೀಣ್ ಪುತ್ತೂರಿನ ಖಾಸಗಿ ನೆಟ್ಟಾರು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ನೆಟ್ಟಾರು ಸಾವನ್ನಪ್ಪಿದ್ದಾರೆ . ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿದ್ದಾರೆ . ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ .


 ಪುತ್ತೂರಿನಲ್ಲಿ ಪ್ರವೀಣ್ ಹತ್ಯೆ ಹಿನ್ನಲೆ ಪರಿಸ್ಥಿತಿ ಬಿಗಡಾಯಿಸಿದ್ದು , ಪುತ್ತೂರಿನಾದ್ಯಂತ 144 ಸೆಕ್ಷನ್ ಜಾರಿ ಮಾಡುವಂತೆ ಸೂಚನೆ ನೀಡಿದ್ದಾಗ ಡಿಜಿ ಐಜಿಪಿ ಪ್ರವೀಣ್ ಸೂದ್ ರಿಂದ ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಗೆ ಸೂಚನೆ ನೀಡಲಾಗಿದೆ . 




ಯಾವುದೇ ಕಾರಣಕ್ಕೂ ಲಾ ಅಂಡ್ ಆರ್ಡರ್ ಸಮಸ್ಯೆ ಆಗದಂತೆ ಸೂಚನೆ ನೀಡಲಾಗಿದೆ . ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಬೇಕಾದರೆ ಪಕ್ಕದ ಜಿಲ್ಲೆ ಅಥವಾ ಮಂಗಳೂರು ಸಿಟಿಯಿಂದ ನಿಯೋಜನೆ ಮಾಡುವಂತೆ ಡಿಜಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ . 

ಆರೋಪಿಗಳಿಗಾಗಿ ಬಲೆ ಬೀಸಿರುವ ಪೊಲೀಸರು ಕೇರಳ ಗಡಿ ಪ್ರದೇಶ ಹಾಗೂ ಪುತ್ತೂರಿನ ಸುತ್ತಮುತ್ತ ನಾಕಾಬಂದಿ ಹಾಕಿದ್ದಾರೆ . ನಾಕಾಬಂದಿ ಹಾಕಿ ಕೊಲೆ ಆರೋಪಿಗಳಿಗಾಗಿ ತಲಾಶ್ ನಡೆಸುತ್ತಿದ್ದಾರೆ .



0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo