Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

*ದೇಶದ 15ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದ್ರೌಪದಿ ಮುರ್ಮು*25-7-2022



ರಾಷ್ಟ್ರದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಇಂದು ಬೆಳಗ್ಗೆ 10.15ಕ್ಕೆ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಅವರು ದ್ರೌಪದಿ ಮುರ್ಮು ಅವರಿಗೆ ಪ್ರಮಾಣ ವಚನ ಬೋಧಿಸಿದರು.

ದ್ರೌಪದಿ ಮುರ್ಮು ದೇಶದ ಎರಡನೇ ಮಹಿಳಾ ರಾಷ್ಟ್ರಪತಿಯಾಗಿದ್ದಾರೆ, ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ ಎಂಬ ಹೆಗ್ಗಳಿಕೆ ಇವರದ್ದು. ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ನಿರ್ಗಮಿತ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಸಂಸದರು ಹಾಗೂ ವಿವಿಧ ಸಚಿವರುಗಳು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಂಸದರು, ರಾಜತಾಂತ್ರಿಕ ಕಾರ್ಯಗಳ ಮುಖ್ಯಸ್ಥರು, ಸರ್ಕಾರದ ಪ್ರಧಾನ ನಾಗರಿಕ ಮತ್ತು ಮಿಲಿಟರಿ ಅಧಿಕಾರಿಗಳು ಈ ಸಮಾರಂಭದಲ್ಲಿ ಭಾಗವಹಿಸಿದರು.




ಸಮಾರಂಭದ ಬಳಿಕ ರಾಷ್ಟ್ರಪತಿಗಳು ರಾಷ್ಟ್ರಪತಿ ಭವನಕ್ಕೆ ತೆರಳಲಿದ್ದು, ಅಲ್ಲಿ ಅವರಿಗೆ ಸೇನಾ ಗೌರವ ನೀಡಲಾಗುತ್ತದೆ. ಈ ಸಂದರ್ಭ ನಿರ್ಗಮಿತ ರಾಷ್ಟ್ರಪತಿಗೂ ಗೌರವ ಸಲ್ಲಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ರಾಷ್ಟ್ರಪತಿ ಹುದ್ದೆ ಅಲಂಕರಿಸಿದ ಬುಡಕಟ್ಟು ಸಮುದಾಯದ ಮೊದಲನೆಯವರು ಎಂಬ ಹೆಗ್ಗಳಿಕೆಗೆ ಮುರ್ಮು ಪಾತ್ರರಾಗಿದ್ದಾರೆ.



0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo