Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

*ಮಂಗಳೂರಿನಲ್ಲಿ ಪಬ್ ಮೇಲೆ ಭಜರಂಗದಳ‌ ದಾಳಿ, ವಿದ್ಯಾರ್ಥಿಗಳ ಮೋಜು ಮಸ್ತಿಗೆ ಬ್ರೇಕ್..!*26-7-2022



ಮಂಗಳೂರು: ವಿದ್ಯಾರ್ಥಿಗಳ ಕಿಸ್ಸಿಂಗ್ ಪ್ರಕರಣದ ಮೂಲಕ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಮಂಗಳೂರಿನಲ್ಲಿ ಇದೀಗ ಭಜರಂಗದಳ‌ ಕಾರ್ಯಕರ್ತರು ಪಬ್ ಮೇಲೆ ದಾಳಿ ಮಾಡಿ ವಿದ್ಯಾರ್ಥಿಗಳ ವಿದಾಯಕೂಟಕ್ಕೆ ಅಡ್ಡಿ ಪಡಿಸಿದ್ದಾರೆ ಎನ್ನಲಾಗಿದೆ.

ಮಂಗಳೂರು ನಗರದ ಪಬ್ ಒಂದರಲ್ಲಿ ಕಾಲೇಜು ವಿದ್ಯಾರ್ಥಿಗಳು ಸಹಪಾಠಿಗಳ ಜೊತೆ ಸೇರಿ ವಿದಾಯಕೂಟ ಆಚರಿಸುತ್ತಿದ್ದ ಸಂದರ್ಭದಲ್ಲಿ ಬಜರಂಗ ದಳದ ಕಾರ್ಯಕರ್ತರು ಸೋಮವಾರ ರಾತ್ರಿ ಅಲ್ಲಿಗೆ ತೆರಳಿ ವಿದ್ಯಾರ್ಥಿಗಳ ಮೋಜುಮಸ್ತಿಗೆ ಅಡ್ಡಿಪಡಿಸಿದ್ದಾರೆ ಎನ್ನಲಾಗಿದೆ. 




ಪಬ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳು ನಡೆಸ್ತಾ ಇದ್ದ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರು ತಡೆಯೊಡ್ಡಿದ್ದು, ಪಾರ್ಟಿಯಲ್ಲಿ ತೊಡಗಿದ್ದ ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿ ಪಬ್‌ನಿಂದ ಹೊರಗೆ ಕಳುಹಿಸಿದ ಘಟನೆ ಮಂಗಳೂರಿನ ಬಲ್ಮಠ ಬಳಿ ನಡೆದಿದೆ.

ಮಂಗಳೂರಿನ ಬಲ್ಮಠದ ರಿ-ಸೈಕಲ್ ದಿ ಲಾಂಜ್ ಪಬ್‌ನಲ್ಲಿ ಪಾರ್ಟಿಗೆ ಭಜರಂಗದಳದ ಕಾರ್ಯಕರ್ತರು ಅಡ್ಡಿಪಡಿಸಿದ್ದು, ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಂದ ಪಾರ್ಟಿ ನಡೆಯುತ್ತಿತ್ತು. ಕುಡಿದು ಯುವಕ-ಯುವತಿಯರಿಂದ ಮೋಜು ಮಸ್ತಿ ಆರೋಪಿಸಿ ಭಜರಂಗದಳ ತಡೆ ಒಡ್ಡಿದೆ. ಕಾಲೇಜು ಫೇರ್ ವೆಲ್ ನೆಪದಲ್ಲಿ ಪಬ್‌ನಲ್ಲಿ ಪಾರ್ಟಿ ನಡೆಯುತ್ತಿತ್ತು ಎನ್ನಲಾಗಿದೆ.ಪಬ್ ಒಳ ಹೊಕ್ಕು ಪಾರ್ಟಿ ನಿಲ್ಲಿಸಿದ ಬಜರಂಗದಳದ ಕಾರ್ಯಕರ್ತರು, ಪಾರ್ಟಿ ನಿಲ್ಲಿಸುವಂತೆ ಸೂಚಿಸಿ ಬೈದು ವಿದ್ಯಾರ್ಥಿಗಳನ್ನ ಹೊರ ಕಳುಹಿಸಿದ್ದಾರೆ. ಬಳಿಕ ಮಧ್ಯ ಪ್ರವೇಶಿಸಿ ಬಜರಂಗದಳದ ಕಾರ್ಯಕರ್ತರನ್ನ ಪೊಲೀಸರು ಚದುರಿಸಿದ್ದು, ಸದ್ಯ ಪಾರ್ಟಿ ಅರ್ಧದಲ್ಲೇ ನಿಲ್ಲಿಸಿ ಕಾಲೇಜು ವಿದ್ಯಾರ್ಥಿಗಳು ಕಾಲ್ಕಿತ್ತಿದ್ದಾರೆ. ತುಂಡುಡುಗೆ ತೊಟ್ಟು ಕುಡಿದು ವಿದ್ಯಾರ್ಥಿಗಳಿಂದ ಮೋಜು ಮಸ್ತಿ ಆರೋಪದ ಮೇಲೆ ಸುಮಾರು 30-40 ಬಜರಂಗದಳದ ಕಾರ್ಯಕರ್ತರು ಅಡ್ಡಿ ಪಡಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಲಿಪ್ ಲಾಕ್ ವಿಡಿಯೋ ಮೂಲಕ ಸುದ್ದಿಯಾಗಿದ್ದ ಕಾಲೇಜಿನ ವಿದ್ಯಾರ್ಥಿಗಳು ಎನ್ನಲಾಗಿದ್ದು, ಪದವಿ ವಿದ್ಯಾರ್ಥಿಗಳಿಂದ ಪಬ್‌ನಲ್ಲಿ ಮೋಜು ಮಸ್ತಿ ಹಿನ್ನೆಲೆ ತಡೆ ಒಡ್ಡಲಾಗಿದೆ.



0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo