ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ನಾಳೆಯಿಂದ ಮತ್ತೆ ಮಳೆಯ ಅಬ್ಬರ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ, ಮಲೆನಾಡು, ಬೆಂಗಳುರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ನಾಳೆಯಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಕೆ ಮಾಹಿತಿ ನೀಡಿದೆ.
ಕರಾವಳಿಯ ಎಲ್ಲ ಜಿಲ್ಲೆಗಳು, ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಬೆಂಗಳೂರು, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ದಾವಣಗೆರೆ, ಮೈಸೂರು ಭಾಗದಲ್ಲಿ ಮಳೆಯಾಗಲಿದೆ. ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆ ಹೆಚ್ಚಳವಾಗುವ ಸಾಧ್ಯತೆ ಇದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ