Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಕುಂದಾಪುರ:- ಅಕ್ರಮ ಜಾನುವಾರು ಸಾಗಾಟ ಆರೋಪಿಯ ಗಡಿಪಾರು 27-7-2022

 


ಕುಂದಾಪುರ: ಉಡುಪಿ ಜಿಲ್ಲೆಯ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಕಳವು, ಅಕ್ರಮ ಜಾನುವಾರು ಸಾಗಾಟ ಮತ್ತು ಹಿಂಸೆ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಯನ್ನು ಗಡಿಪಾರು ಮಾಡಿ ಕುಂದಾಪುರ ಉಪವಿಭಾಗಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಕುಂದಾಪುರ ಗ್ರಾಮಾಂತರ ಠಾಣಾ ಸರಹದ್ದಿನ ಗುಲ್ವಾಡಿ ಗ್ರಾಮದ ಕಾಂಡ್ಲಗದ್ದೆ ನಿವಾಸಿ 43 ವರ್ಷ ಪ್ರಾಯದ ಅಬೂಬಕ್ಕರ್ ಎಂಬಾತ ಗಡಿಪಾರಾದ ಆರೋಪಿಯಾಗಿದ್ದಾನೆ.




ಈತ ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ತನ್ನ ಸಹಚರರೊಂದಿಗೆ ತಮ್ಮದೇ ಆದ ಒಂದು ತಂಡವನ್ನು ಕಟ್ಟಿಕೊಂಡು, ಕಳವು, ಅಕ್ರಮ ಜಾನುವಾರು ಸಾಗಾಟ ಮತ್ತು ಹಿಂಸೆ ಪ್ರಕರಣಗಳಲ್ಲಿ ಭಾಗಿಯಾಗಿದ್ದನು ಎನ್ನಲಾಗಿದೆ.


ಈತನ ವಿರುದ್ಧ 9 ಪ್ರಕರಣಗಳು ದಾಖಲಾಗಿವೆ ಎಂದು ತಿಳಿಯಲಾಗಿದೆ.



0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo