Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಪ್ರವೀಣ್ ಕೊಲೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಸಚಿವ ಸುನಿಲ್ ಕುಮಾರ್ 27-7-2022

 




ಸುಳ್ಯ: ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಜ್ಯ ಸಕಾ೯ರ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ರಾಜ್ಯ ಗೃಹಸಚಿವರ ಜತೆ ಚರ್ಚೆ ನಡೆಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.


ಬಿಜೆಪಿ ಯುವ ಮುಖಂಡ, ಅಮಾಯಕ ಪ್ರವೀಣ್ ಬೆಳ್ಳಾರೆ ಮೇಲೆ ದಾಳಿ, ಕೊಲೆ ಕೃತ್ಯ ಖಂಡನೀಯ. ಇದನ್ನು ನೋಡಿ ಸುಮ್ಮನಿರಲು ಸಾಧ್ಯವಿಲ್ಲ. ಘಟನೆ ಬಗ್ಗೆ ಈಗಾಗಲೇ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಮಾಹಿತಿ ಕಲೆ ಹಾಕಿ, ಗೃಹ ಸಚಿವರಿಗೆ ವರದಿ ಮಾಡಲಾಗಿದೆ. ಆರೋಪಿಗಳ ಬಂಧನಕ್ಕೆ ಶೀಘ್ರ ತಂಡ ರಚಿಸಿ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಶಾಂತಿ ಕದಡುವ ದುಷ್ಕರ್ಮಿಗಳ ಮಟ್ಟಹಾಕುವ ಕೆಲಸವನ್ನು ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ ಎಂದು ಅವರು ಹೇಳಿದ್ದಾರೆ.




ಉದ್ವೇಗ ಬೇಡ: ಪ್ರವೀಣ್ ಹತ್ಯೆ ವಿಚಾರದಲ್ಲಿ ಯಾರೂ ಉದ್ವೇಗಕ್ಕೊಳಗಾಗುವುದು ಬೇಡ. ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಶಾಂತಿ ಪ್ರಿಯರು. ಕೊಲೆ ವಿಚಾರದಲ್ಲಿ ಆರೋಪಿಗಳ ಮಟ್ಟಹಾಕುವ ಪ್ರಯತ್ನ ಶೀಘ್ರದಲ್ಲೇ ಆಗಲಿದೆ ಎಂದರು.


ಧರಣಿ: ಕೊಲೆಯಾದ ಪ್ರವೀಣ್ ನೆಟ್ಟಾರು ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ. ಅವರ ಮೃತದೇಹ ಪುತ್ತೂರು ಪ್ರಗತಿ ಆಸ್ಪತ್ರೆಯಲ್ಲಿದೆ. ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ಮೃತದೇಹವನ್ನು ಕೊಂಡೊಯ್ಯಲು ಸಿದ್ಧತೆ ನಡೆಯುತ್ತಿರುವಂತೆಯೇ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸಬೇಕು ಎಂದು ಒತ್ತಾಯಿಸಿದ್ದಾರೆ. ಆಸ್ಪತ್ರೆ ಮುಂಭಾಗ ಧರಣಿ ಕುಳಿತಿದ್ದಾರೆ.






0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo