Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಬಿಜೆಪಿ ಸರಕಾರ ಸಂಪೂರ್ಣಬಿಜೆಪಿ ಜನೋತ್ಸವ ಮಾಡುವ ಬದಲು ಅಮಾಯಕರ ಜೀವ ರಕ್ಷಣೆ ಮಾಡಲಿ :-ರಮೇಶ್ ಕಾಂಚನ್ 27-7-2022

 


ಉಡುಪಿ: ಬೆಳ್ಳಾರೆಯ ಪ್ರವೀಣ್ ನೆಟ್ಟಾರೆ ಹತ್ಯೆ ಪ್ರಕರಣ ಖಂಡನೀಯ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಬಿಜೆಪಿ ಸರಕಾರ ಸಂಪೂರ್ಣ ವಿಫಲವಾಗಿದ್ದು ದುಷ್ಕರ್ಮಿಗಳ ದಾಳಿಗೆ ಅಮಾಯಕರು ಬಲಿಯಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಬಿಜೆಪಿ ಜನೋತ್ಸವದಂತಹ ನಾಟಕಗಳನ್ನು ಮಾಡುವ ಬದಲು ಅಮಾಯಕರ ಜನರ ರಕ್ಷಣೆಗೆ ಮುಂದಾಗಲಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆಗ್ರಹಿಸಿದ್ದಾರೆ.




ಪ್ರವೀಣ್ ನೆಟ್ಟಾರೆ ಕೊಲೆ ಪ್ರಕರಣದ ಆರೋಪಿಗಳನ್ನು ತಕ್ಷಣ ಬಂಧಿಸಿ ಕಾನೂನಿನ ಪ್ರಕಾರ ಸೂಕ್ತ ಶಿಕ್ಷೆಯಾಗುವಂತೆ ಕ್ರಮ ವಹಿಸಬೇಕಾಗಿದೆ. ಇತ್ತೀಚೆಗೆ ಬೆಳ್ಳಾರೆ ಪರಿಸರದಲ್ಲಿ ಮಸೂದ್ ಮತ್ತು‌ ಪ್ರವೀಣ್ ಕೊಲೆ ಸಂಭವಿಸಿದೆ. ಇದು ಅತ್ಯಂತ ಖಂಡನೀಯ. ಇಂತಹ ಘಟನೆಗಳು ಮುಂದೆ ಆಗದಂತೆ ಕ್ರಮ ವಹಿಸಬೇಕೆಂದು ಆಗ್ರಹಿಸಿದರು.


ಕೊಲೆಗಾರರ ಜಾತಿ,ಧರ್ಮ,ಪಕ್ಷ ಯಾವುದನ್ನು ಲೆಕ್ಕಿಸದೆ ಪೊಲೀಸರು ಹೆಡೆಮುರಿ ಕಟ್ಟಬೇಕಾಗಿದೆ. ಅದರೊಂದಿಗೆ ಜನರು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕು. ಯಾವುದೇ ಪ್ರಚೋದನೆಗೆ ಒಳಗಾಗದೆ ಪೊಲೀಸರ ತನಿಖೆಗೆ ಸಹಕರಿಸಬೇಕೆಂದು ರಮೇಶ್ ಕಾಂಚನ್ ಈ ಸಂದರ್ಭದಲ್ಲಿ ವಿನಂತಿಸಿದ್ದಾರೆ.



0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo