ಬೆಂಗಳೂರು:ಎಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಿದ 2022-23 ಸಾಲಿನ ರಾಜ್ಯ ಸಿಇಟಿ ಫಲಿತಾಂಶ ಜುಲೈ 29 ಅಥವಾ 30ಕ್ಕೆ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.
ಸಿಬಿಎಸ್ಇ,ಐಸಿಎಸ್ಇ 12ನೇ ತರಗತಿ ಫಲಿತಾಂಶ ಪ್ರಕಟವಾಗಿರುವುದರಿಂದ ಸಿಇಟಿ ಫಲಿತಾಂಶ ನೀಡಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಎಲ್ಲಾ ಸಿದ್ದತೆಗಳು ಪೂರ್ಣಗೊಂಡರೆ ಜುಲೈ 29 ಇಲ್ಲವೇ 30ರಂದು ಫಲಿತಾಂಶ ಪ್ರಕಟಿಸುತ್ತೇವೆ ಎಂದು ಕೆಇಎ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ