ಬೆಂಗಳೂರು: ರಾಜ್ಯದಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಇನ್ನೂ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.
ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮುಂದಿನ 48 ಗಂಟೆಗಳಲ್ಲಿ ಮಳೆ ಆರ್ಭಟ ಇನ್ನಷ್ಟು ಹೆಚ್ಚಲಿದೆ.
ದಕ್ಷಿಣ ಕನ್ನಡ, ಮಂಗಳೂರಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಇಂದು ಕೂಡ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜುಲೈ 2ರಿಂದ 4ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭಾರಿ ಮಳೆ ಬೆನ್ನಲ್ಲೇ ಕೊಡಗು ಹಾಗೂ ದಕ್ಷಿಣ ಕನ್ನಡ ಭಾಗಗಳಲ್ಲಿ ಭೂಕಂಪವುಂಟಾಗಿದ್ದು, ಜನರು ಇನ್ನಷ್ಟು ಆತಂಕಕ್ಕೊಳಗಾಗಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ