ನಗರದ ಕೆ.ಆರ್.ಸರ್ಕಲ್ ಹಾಗೂ ಹಡ್ಸನ್ ಸರ್ಕಲ್ ಬಳಿ ಟಿಪ್ಪು ಸುಲ್ತಾನ್ ಬ್ಯಾನರ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್ ಪೊಲೀಸರು ಹಿಂದು ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ.
ನಾಗಸಂದ್ರದ ಬಳಿ ಪುನೀತ್ ಕೆರೆಹಳ್ಳಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.ಕೋಮು ಸೌಹಾರ್ದತೆಗೆ ಧಕ್ಕೆ ಯತ್ನದ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಶಿವಮೊಗ್ಗದ ಮಾಲ್ವೊಂದರಲ್ಲಿ ವಿನಾಯಕ ದಾಮೋದರ ಸಾವರ್ಕರ್ ಅವರ ಫೋಟೋ ಹಾಕಿದ್ದಕ್ಕೆ ಎಸ್ಡಿಪಿಐ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ನಿನ್ನೆ (ಆ.13) ಫೋಟೋ ತೆಗೆಸಿದ್ದರು. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ಹಾಗೂ ಅವರ ತಂಡ ಕೆ.ಆರ್. ಸರ್ಕಲ್ ಹಾಗೂ ಹಡ್ಸನ್ ಸರ್ಕಲ್ ಎರಡೂ ಕಡೆ ಅಳವಡಿಸಿದ್ದ ಟಿಪ್ಪು ಸುಲ್ತಾನ್ ಫ್ಲೆಕ್ಸ್ಗಳನ್ನು ನಿನ್ನೆ ರಾತ್ರಿ ಹರಿದುಹಾಕಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ