ಬೆಂಗಳೂರು: ಸರ್ಕಾರದ ಜಾಹೀರಾತಿನಲ್ಲಿ ಉದ್ದೇಶಪೂರ್ವಕವಾಗಿಯೇ ನೆಹರೂ ಭಾವಚಿತ್ರ ಕೈಬಿಟ್ಟಿದ್ದೇವೆ. ನೆಹರೂ ದೇಶ ವಿಭಜನೆಗೆ ಕಾರಣರಾದವರು, ಮಹಾತ್ಮ ಗಾಂಧಿಯವರ ಮಾತನ್ನೇ ನೆಹರು ಕೇಳಲಿಲ್ಲ. ಸ್ವಾತಂತ್ರ್ಯ ಬಂದ ನಂತರ ಕಾಂಗ್ರೆಸ್ ವಿಸರ್ಜಿಸಿ ಅಂತ ಗಾಂಧೀಜಿ ಹೇಳಿದ್ದರು. ಆದರೆ, ನೆಹರೂ ಕಾಂಗ್ರೆಸ್ ವಿಸರ್ಜಿಸಲಿಲ್ಲ. ಹಾಗಾಗಿ ನಾವು ಜಾಹೀರಾತಿನಲ್ಲಿ ನೆಹರೂ ಭಾವಚಿತ್ರ ಕೈಬಿಟ್ಟಿದ್ದೇವೆ ಎಂದು ರಾಜ್ಯ ಸರ್ಕಾರದ ನಡೆಯನ್ನು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಸಮರ್ಥಿಸಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ದೇಶಪೂರ್ವಕವಾಗಿ ಜವಾಹರಲಾಲ್ ನೆಹರೂ ಅವರ ಫೋಟೋವನ್ನು ಪತ್ರಿಕೆಯಲ್ಲಿ ನೀಡಿದ ಸರ್ಕಾರಿ ಜಾಹೀರಾತಿನಲ್ಲಿ ಕೈ ಬಿಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಾವು ಉದ್ದೇಶಪೂರ್ವಕವಾಗಿಯೇ ನೆಹರೂ ಭಾವಚಿತ್ರ ಕೈ ಬಿಟ್ಟಿದ್ದೇವೆ, ದೇಶ ವಿಭಜನೆಯ ಕರಾಳ ನೆನಪು ಅಂತ ಆಚರಣೆ ಮಾಡುತ್ತಿದ್ದೇವೆ. ಗಾಂಧೀಜಿಯವರ ಮಾತನ್ನು ನೆಹರೂ ಕೇಳಲಿಲ್ಲ, ಮಹಾತ್ಮ ಗಾಂಧೀಜಿಯವರ ಮಾತನ್ನು ಕೇಳದೆ, ದೇಶ ವಿಭಜನೆಗೆ ಕಾರಣವಾಗಿರುವ ನೆಹರೂ ಅವರ ಫೋಟೋವನ್ನು ನಾವು ಹಾಕಲ್ಲ ಎಂದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ