Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿಯಲ್ಲೂ ಸಾವರ್ಕರ್ ಭಾವಚಿತ್ರದ ಫ್ಲೆಕ್ಸ್ ‌‌ಗೆ ಪಿ.ಎಫ್.ಐ ವಿರೋಧ 16-8-2022

 


ಸ್ವಾತಂತ್ರ್ಯಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಬ್ರಹ್ಮಗಿರಿ ಸರ್ಕಲ್​ನಲ್ಲಿ ಹಿಂದೂ ಮಹಾಸಭಾ ಮುಖಂಡರು ವೀರ ಸಾವರ್ಕರ್​ ಭಾವಚಿತ್ರವಿರುವ ಫ್ಲೆಕ್ಸ್ ಅಳವಡಿಸಿದ್ದು, ಇದಕ್ಕೆ ಪಿಎಫ್‌ಐ ಸಂಘಟನೆ ವಿರೋಧ ವ್ಯಕ್ತಪಡಿಸಿದೆ. ಈ ಫ್ಲೆಕ್ಸ್​ ಅನ್ನು ತೆರವು ಮಾಡುವಂತೆ ಪೊಲೀಸರಿಗೆ ಮನವಿ ಸಲ್ಲಿಸಿದೆ.

ಶಿವಮೊಗ್ಗದಲ್ಲಿ ಸಾರ್ವಕರ್ ಭಾವಚಿತ್ರವುಳ್ಳ ಫ್ಲೆಕ್ಸ್​ ತೆರವು ಸಂಬಂಧ ನಡೆದ ಗಲಾಟೆಯಲ್ಲಿ ಚಾಕು ಇರಿದಿರುವ ಪ್ರಕರಣ ಬಿಗುವಿನ ವಾತಾವರಣ ನಿರ್ಮಿಸಿದೆ. ಇದರ ಬೆನ್ನಲ್ಲೇ ತುಮಕೂರು ನಗರದ ಎಂಪ್ರೆಸ್​ ಕಾಲೇಜು ಬಳಿಯೂ ಸಾರ್ವಕರ್ ಭಾವಚಿತ್ರವಿದ್ದ ಫ್ಲೆಕ್ಸ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಇಷ್ಟೆಲ್ಲಾ ಬೆಳವಣಿಗೆ ಬಳಿಕ ಉಡುಪಿಯಲ್ಲೂ ವಿವಾದ ಶುರುವಾಗಿದೆ. ಹೀಗಾಗಿ ಉಡುಪಿಯಲ್ಲೂ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.




ಉಡುಪಿ ನಗರಸಭೆಯ ಅನುಮತಿ ಪಡೆದು ಫ್ಲೆಕ್ಸ್ ಅಳವಡಿಸಲಾಗಿದ್ದು, ಇದನ್ನು ತೆರವು ಮಾಡಲು 10 ದಿನಗಳ ಕಾಲಾವಕಾಶವಿದೆ. ಹೀಗಾಗಿ ಪೊಲೀಸರು ಈ ಪ್ರದೇಶದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತೆ ಒದಗಿಸಿದ್ದಾರೆ.



0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo