ಬೆಂಗಳೂರು: ಬಿಜೆಪಿ ಹೈಕಮಾಂಡ್ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಂಪರ್ ಗಿಫ್ಟ್ ನೀಡಿದ್ದು, ಬಿಎಸ್ ವೈ ಅವರನ್ನು ಪಕ್ಷದ ಸಂಸದೀಯ ಮಂಡಳಿಯ ಸದಸ್ಯರನ್ನಾಗಿ ಮಾಡಿದೆ.
ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯನ್ನು ಪುನರ್ ರಚಿಸಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಅಧ್ಯಕ್ಷತೆಯಲ್ಲಿ ಹೊಸ ಸಮಿತಿ ರಚಿಸಲಾಗಿದೆ.
ಈ ಸಮಿತಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿ.ಎಸ್. ಯಡಿಯೂರಪ್ಪ, ಸರ್ಬಾನಂದ್ ಸೋನಾವಲ್ ಸೇರಿ ಹಲವರು ಸ್ಥಾನ ಪಡೆದಿದ್ದಾರೆ.
ಇನ್ನು ಬಿ.ಎಲ್. ಸಂತೋಷ್ ಅವರನ್ನು ಸಂಸದೀಯ ಮಂಡಳಿಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ