Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ:-ದೇವರಾಜ ಅರಸು ಜಯಂತಿ ಅರ್ಥಪೂರ್ಣವಾಗಿ ಆಚರಣೆ : ಕೋಟ ಶ್ರೀನಿವಾಸ ಪೂಜಾರಿ17-8-2022

 


ಉಡುಪಿ :ಹಿಂದುಳಿದ ವರ್ಗಗಳ ನಾಯಕ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 107 ನ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಗಸ್ಟ್ 20 ರಂದು 22 ರ ವರೆಗೆ 3 ದಿನಗಳ ಕಾಲ ಅಜ್ಜರಕಾಡಿನ ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ಆಚರಿಸಲಾಗುವುದು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಡಿ.ದೇವರಾಜ ಅರಸು ಜಯಂತಿ ಆಚರಣೆ ಕುರಿತ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹಿಂದುಳಿದ ವರ್ಗದವರ ಕಲ್ಯಾಣಾಭಿವೃದ್ಧಿಗೆ ದೇವರಾಜ ಅರಸು ಅವರ ಕೊಡುಗೆ ಅಪಾರವಾದುದು, ಅವರು ಅನುಷ್ಠಾನಗೊಳಿಸಿದ ಯೋಜನೆಗಳಿಂದ ಆ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಿದೆ ಅವರ ಸ್ಮರಣೆ ಶಾಶ್ವತವಾದುದು ಎಂದರು.

 ಆಗಸ್ಟ್ 20 ರಂದು ಮಹಾತ್ಮ ಗಾಂಧೀ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ ಅವರು ಮಧ್ಯಾಹ್ನ 3.30 ಕ್ಕೆ ಕಾರ್ಯಕ್ರಮವನ್ನು ಉದ್ಘಾಟಿಸಿ , ಜಿಲ್ಲಾ ಮಟ್ಟದ ಡಿ.ದೇವರಾಜ ಅರಸು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ದೇವರಾಜ ಅರಸು ಅವರ ಕುರಿತು ಉಪನ್ಯಾಸ ಕಾರ್ಯಕ್ರಮ ಸಹ ನಡೆಯಲಿದೆ ಎಂದರು.




 ಕಾರ್ಯಕ್ರಮದಲ್ಲಿ ವಿವಿಧ ಹಿಂದುಳಿದ ವರ್ಗಗಳ ಸಮುದಾಯಗಳ ಕಸಬುಗಾರಿಕೆಯ ಕರ ಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳ ಉದ್ಘಾಟನೆ ನಡೆಯಲಿದೆ. ಆಗಸ್ಟ್ 21 ರಂದು ಬೆಳಗ್ಗೆ 10 ಗಂಟೆಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಆಗಸ್ಟ್ 22 ರಂದು ಬೆಳಗ್ಗೆ 10 ಗಂಟೆಗೆ ಮೊರಾರ್ಜಿ ದೇಸಾಯಿ ವಸತಿ ಶಾಲಾ ವಿದ್ಯಾರ್ಥಿಗಳಿಂದ ಕರಾಟೆ ಹಾಗೂ ಯೋಗ ಪ್ರದರ್ಶನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಕತ್ವದಲ್ಲಿ ಜಿಲ್ಲೆಯ ಸುಪ್ರಸಿದ್ಧ ಯಕ್ಷಗಾನ ಕಲಾವಿದರಿಂದ ಯಕ್ಷ ಕೂಟ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2.30 ಕ್ಕೆ ಡಿ. ದೇವರಾಜ ಅರಸು ಜನ್ಮ ದಿನಾಚರಣೆಯ ಸಮಾರೋಪ ಸಮಾರಂಭ ನಡೆಯಲಿದೆ. 

ಜನ್ಮ ದಿನಾಚರಣೆಯ ಅಂಗವಾಗಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ವಿಜೇತರಿಗೆ ಸಮಾರೋಪ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು ಎಂದ ಅವರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿ.ಪಂ. ಸಿಇಓ ಪ್ರಸನ್ನ ಹೆಚ್. , ಜಿಲ್ಲಾ ಹಿಂದುಳಿದ ವರ್ಗಗಳ ಅಧಿಕಾರಿ ಸಚಿನ್ ಕುಮಾರ್ ,ವಾರ್ತಾಧಿಕಾರಿ ಬಿ.ಮಂಜುನಾಥ್, ಹಾಗೂ ವಿವಿಧ ಹಿಂದುಳಿದ ವರ್ಗಗಳ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.



0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo