ಶಿವಮೊಗ್ಗ: ಎರಡು ಕೋಮಿನ ಗುಂಪಿನಿಂದ ಶಿವಮೊಗ್ಗ ಜಿಲ್ಲೆ ಬಿಗುವಿಣ ವಾತಾವರಣ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾತ್ರಿ ಹೊತ್ತು ಅನಗತ್ಯ ಬೈಕ್ ಸಂಚಾರ ನಿಷೇಧಿಸಿ, ಬೈಕ್ ನಲ್ಲಿ ಇಬ್ಬರು ಯುವಕರು ಸಂಚರಿಸದಂತೆ ಎಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ದ್ವಿಚಕ್ರ ವಾಹನ ಸವಾರರು ಹಿಂಬದಿಯಲ್ಲಿ 40 ವರ್ಷಕ್ಕಿಂತ ಕಿರಿಯ ವಯಸ್ಸಿನವರನ್ನು ಕೂರಿಸಿಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. 40 ವರ್ಷ ಮೇಲ್ಪಟ್ಟ ವಯಸ್ಕರು ಮತ್ತು ಮಹಿಳೆಯರಿಗೆ ರಿಯಾಯಿತಿ ನೀಡಲಾಗಿದೆ.
ರಾತ್ರಿ 9 ರಿಂದ ಬೆಳಗಿನ ಜಾವ 5ರವರೆಗೆ ತುರ್ತು ಸಂದರ್ಭವನ್ನು ಹೊರತುಪಡಿಸಿ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದು ಆದೇಶಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ