ಭಾರತದ 76ನೇ ಸ್ವಾತಂತ್ರ್ಯೋತ್ಸವವನ್ನು ಉಡುಪಿಯ ಎಂ.ಜಿ.ಎಂ ಕಾಲೇಜಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ಸೇನಾನಿಗಳ ತ್ಯಾಗದಿಂದ ಈ ದೇಶವನ್ನು ಕಟ್ಟಲಾಗಿದೆ. ಮುಂದಿನ 25 ವರ್ಷಗಳ ಅಭಿವೃದ್ಧಿಯ ಕನಸನ್ನು ಎಲ್ಲರೂ ಜೊತೆಯಾಗಿ ನನಸಾಗಿಸಬೇಕು ಎಂದರು.
ಈ ವೇಳೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಮಾಲತಿ ದೇವಿ, ಎನ್.ಸಿ.ಸಿ, ಎನ್ನೆಸ್ಸೆಸ್ಸ್, ರೇಂಜರ್ಸ್, ರೋವರ್ಸ್, ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿಯ ಅಧಿಕಾರಿಗಳು, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ