ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಆರೋಗ್ಯದಲ್ಲಿ ಏರುಪೇರಾಗಿದ್ದು, ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿರುವ ಅವರು ಆರೋಗ್ಯದಲ್ಲಿ ಏರುಪೇರಾಗಿದ್ದು, ತುರ್ತು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ವೈದ್ಯರ ಸಲಹೆಯಂತೆ 4-5 ದಿನಗಳ ಕಾಲ ಸಾರ್ವಜನಿಕ ಸಂಪರ್ಕಕ್ಕೆ ಸಿಗುತ್ತಿಲ್ಲ. ಯಾವುದೇ ಕೆಲಸಗಳಿಗಾಗಿ ನನ್ನ ಆಪ್ತ ಸಹಾಯಕರನ್ನು ಮತ್ತು ನನ್ನನ್ನು ದೂರವಾಣಿ ಮೂಲಕ ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ