ಖಾಸಗಿ ಬ್ಯಾಂಕ್ ನ ಲೀಗಲ್ ಆಫೀಸರ್ ಒಬ್ಬರ ಮೃತದೇಹವು ಅವರ ಮನೆಯಲ್ಲಿ ಬೆಂಕಿಯಿಂದ ಸುಟ್ಟ ಸ್ಥಿತಿಯಲ್ಲಿ ಸೋಮವಾರ ಪತ್ತೆಯಾಗಿದೆ.
ರಾಜ್ ಗೋಪಾಲ್ ಸಾಮಗ(42) ಮೃತಪಟ್ಟವರು.
ಉಡುಪಿ ಜಿಲ್ಲೆಯ ಕೃಷ್ಣಮಠ ಸಮೀಪದ ವಾದಿರಾಜ ರಸ್ತೆಯಲ್ಲಿರುವ ಕೃಷ್ಣ ಸಾಮಗ ಅವರ ಮನೆಯಲ್ಲಿ ಹೊಗೆಯನ್ನು ಕಂಡು ನೆರೆ ಮನೆಯವರು ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅಗ್ನಿ ಶಾಮಕದಳ ಹಾಗೂ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಕೋಣೆಯ ಬಾಗಿಲು ಮುರಿದು ಪರಿಶೀಲಿಸಿದಾಗ ರಾಜ ಗೋಪಾಲ್ ಸಾಮಗ ಬೆಂಕಿಯಿಂದ ಸುಟ್ಟು ಮೃತಪಟ್ಟಿರುವುದು ಕಂಡುಬಂದಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಇದೇ ಚಿಂತೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ರಾಜಗೋಪಾಲ ಕೆಲಸ ಮಾಡುತ್ತಿದ್ದಾಗ ಲ್ಯಾಪ್‌ಟಾಪ್ ಸಿಡಿದು ಅಥವಾ ಬೆಂಕಿ ಹಚ್ಚಿಕೊಂಡು ಮೃತಪಟ್ಟಿರಬಹುದೆಂದು ಮನೆಯವರು ದೂರಿದ್ದಾರೆ.
ಸ್ಥಳಕ್ಕೆ ಉಡುಪಿ ನಗರ ಠಾಣಾ ನಿರೀಕ್ಷಕ ಪ್ರಮೋದ್ ಕುಮಾರ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಮೃತರ ತಂದೆ ಕೃಷ್ಣ ಸಾಮಗ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ