ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ ಮೂಲದ ಪ್ರವೀಣ್, ಅಜಯ್ ಬಂಧಿತ ಆರೋಪಿಗಳು.
ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯ ಅಜ್ಜಿ ಮನೆಯಲ್ಲಿ ವಾಸವಾಗಿದ್ದ 8ನೇ ತರಗತಿಯ ಬಾಲಕಿಯನ್ನು ಆರೋಪಿಗಳು ಪುಸಲಾಯಿಸಿ ಮನೆಯ ಹತ್ತಿರದ ಕಾಡಿಗೆ ಕರೆದುಕೊಂಡು ಹೋಗಿದ್ದರು.
ಅಲ್ಲಿ ಅಪ್ರಾಪ್ತೆ ಮೈ ಕೈ ಮುಟ್ಟಿ ಆರೋಪಿಗಳು ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಬಾಲಕಿ ಪ್ರತಿರೋಧ ಒಡ್ಡಿದರೂ, ಅವಳ ಮಾತನ್ನು ಕೇಳದೇ ಆರೋಪಿಗಳು ಆಕೆಯೊಂದಿಗೆ ಲೈಂಗಿಕವಾಗಿ ಅಸಭ್ಯ ವರ್ತನೆ ತೋರಿದ್ದಾರೆ ಎಂದು ದೂರಲಾಗಿದೆ.
ಶಂಕರನಾರಾಯಣ ಪೊಲೀಸ್ ಠಾಣೆ ಎಸ್ಸೈ ಶ್ರೀಧರ್ ನಾಯ್ಕ್ ಹಾಗೂ ಸಿಬ್ಬಂದಿ ತಂಡ ಆರೋಪಿಗಳನ್ನು ಬಂಧಿಸಿದೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ