ರಾಜ್ಯದ ಬಿಜೆಪಿ ಸರ್ಕಾರ 10 ಪ್ರತ್ಯೇಕ ಮುಸ್ಲಿಂ ಕಾಲೇಜುಗಳ ಸ್ಥಾಪನೆಗೆ ಮುಂದಾಗಿರುವುದು ಖಂಡನೀಯ. ನನ್ನ ಬಲಿದಾನವಾದ್ರೂ ಸರಿ ಮುಸ್ಲಿಂ ಕಾಲೇಜು ಸ್ಥಾಪನೆಗೆ ನಾನು ಬಿಡುವುದಿಲ್ಲ. ಪ್ರತ್ಯೇಕ ಕಾಲೇಜುಗಳ ಸ್ಥಾಪನೆಯಿಂದ ರಾಜ್ಯ ಸರ್ಕಾರ ಹಿಂದೆ ಸರಿಯಬೇಕು ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ್ ಆಗ್ರಹಿಸಿದರು.
ನಗರದಲ್ಲಿ ಈ ಕುರಿತು ಮಾತನಾಡಿದ ಅವರು, ಮುಸ್ಲಿಂರ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ತುಷ್ಟೀಕರಣ ರಾಜಕಾರಣ ಮಾಡುತ್ತಲೇ ಬಂದಿದೆ. ಈಗ ಬಿಜೆಪಿ ಪಕ್ಷವು ಅದೇ ಹಾದಿಯಲ್ಲಿ ಸಾಗುತ್ತಿದೆ ಅನ್ನಿಸುತ್ತಿದೆ. ಮುಸ್ಲಿಂರಿಗೆ 10 ಪ್ರತ್ಯೇಲ ಕಾಲೇಜು ನಿರ್ಮಾಣ ಮಾಡುವುದು ಸರಿಯಲ್ಲ. ಇದರಿಂದ ಪ್ರತ್ಯೇಕತೆಯನ್ನು ಹುಟ್ಟು ಹಾಕಿದ ಹಾಗೇ ಆಗುತ್ತದೆ. ಹಾಗಾಗಿ ಈ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿಯಬೇಕು. ಸರ್ಕಾರದ ಪ್ರತ್ಯೇಕ ಮುಸ್ಲಿಂ ಕಾಲೇಜುಗಳ ನಿರ್ಮಾಣ ಮಾಡುವುದಕ್ಕೆ ನಾನು ವಿರೋಧ ಮಾಡುತ್ತೇನೆ. ಈ ಸಂಬಂಧ ಹಿಂದೂ ಸಂಘಟನೆಗಳ ಒಕ್ಕೂಟದಿಂದ ಈ ನಿರ್ಧಾರ ವಿರುದ್ಧ ಹೋರಾಟಕ್ಕೆ ಇಳಿಯುತ್ತೇವೆ ಎಂದು ಎಚ್ಚರಿಕೆ
ಕಾಂಗ್ರೆಸ್ ಪಕ್ಷ ಮುಸ್ಲಿಂರಿಗೆ ಸಪೋರ್ಟ್ ಮಾಡಿದ ಪರಿಣಾಮವಾಗಿ ಬಿಜೆಪಿಯವರು ಹೀಗೆ ಮಾಡುತ್ತಿರುವುದು ಸರಿಯಲ್ಲ. ಮುಸ್ಲಿಂರ ಸಂವಿಧಾನ ವಿರೋಧಿ ನೀತಿಗೆ ಕಾಂಗ್ರೆಸ್ ಸಪೋರ್ಟ್ ಮಾಡುತ್ತಲೇ ಬಂದಿದೆ. ಕಾಂಗ್ರೆಸ್‌ನವರ ತುಷ್ಟೀಕರಣ ರಾಜಕಾರಣದಿಂದ ಮುಸ್ಲಿಮರು ಆಜಾನ್, ಹಿಜಾಬ್ ಹಾಗೂ ಗೋ ಹತ್ಯೆ ವಿಚಾರದಲ್ಲಿ ಸಂವಿಧಾನ ಉಲ್ಲಂಘನೆ ಮಾಡುತ್ತಲೇ ಬಂದಿದ್ದಾರೆ. ಈಗ ಬಿಜೆಪಿ ಸರ್ಕಾರ 10 ಮುಸ್ಲಿಂ ಕಾಲೇಜುಗಳನ್ನು ಅವರಿಗಾಗಿ ಸ್ಥಾಪನೆ ಮಾಡುವ ನಿರ್ಧಾರ ಮಾಡಿದೆ. 2.5 ಕೋಟಿಯಲ್ಲಿ ಒಂದು ಕಾಲೇಜಿಗೆ ಖರ್ಚು ಮಾಡುತ್ತಿದೆ. ಈ ಕೂಡಲೇ ರಾಜ್ಯ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯ ಮಾಡಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ