ಬ್ರಹ್ಮಾವರ : ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಬಾರ್ಕೂರು ಹೊಸಾಳ ಎಂಬಲ್ಲಿ ನಡೆದಿದೆ.
ಬಾರ್ಕೂರು ಹೊಸಾಳ ಗ್ರಾಮದ ವಿಜೇಂದ್ರ ಕುಮಾರ ಎಂಬುವವರು ನ.11ರಂದು ಮನೆಗೆ ಬೀಗ ಹಾಕಿ ಕುಟುಂಬದವರೊಂದಿಗೆ ತಿರುಪತಿ ಯಾತ್ರೆಗೆ ಹೋಗಿದ್ದರು. ನ.13ರಂದು ಮಧ್ಯಾಹ್ನ ವಾಪಾಸ್ಸು ಮನೆಗೆ ಬಂದು ನೋಡಿದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ.
ಮನೆಯ ಎದುರಿನ ಪ್ರವೇಶ ಬಾಗಿಲಿನ ಚಿಲಕದ ಕೊಂಡಿಯನ್ನು ಮುರಿದು ಒಳ ಪ್ರವೇಶಿಸಿದ ಕಳ್ಳರು, ಕಪಾಟಿನಲ್ಲಿದ್ದ ಚಿನ್ನದ ರೋಪ್ ಸರ, ಚಿನ್ನದ ಸರ, 2 ಬಳೆಗಳು, ಚಿನ್ನದ ಉಂಗುರ, ಕಿವಿಯ ಬೆಂಡೋಲೆಗಳನ್ನು ಕಳವು ಮಾಡಿರುವುದಾಗಿ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಇವುಗಳ ಒಟ್ಟು ಮೌಲ್ಯ 1,48,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ