ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಜೀವನಾಧಾರಿತ ಕಥೆಯ ಸಿನಿಮಾವನ್ನು ತಯಾರಿಸಲು ಸಿದ್ಧತೆ ನಡೆಯುತ್ತಿದೆ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಸಿದ್ದರಾಮಯ್ಯ ಜೀವನಕಥೆ ಬೆಳ್ಳಿತೆರೆಯ ಮೇಲೆ ಬರುತ್ತಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ.
ಇನ್ನು ಆ ಸಿನಿಮಾದಲ್ಲಿ ಸಿದ್ದರಾಮಯ್ಯ ಪಾತ್ರದಲ್ಲಿ ತಮಿಳು ನಟ ಮತ್ತು ನಿರ್ದೇಶಕ ವಿಜಯ್ ಸೇತುಪತಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ವಿಜಯ್ ಸೇತುಪತಿ ಜೊತೆಗೂ ಈ ವಿಷಯದ ಬಗ್ಗೆ ಮಾತುಕತೆ ನಡೆಸಲಾಗಿದೆ.
ಸಿನಿಮಾ ಮುಹೂರ್ತವನ್ನು ಜನವರಿಯಲ್ಲಿ ನೆರವೇರಿಸಲು ಸಿದ್ದರಾಮಯ್ಯ ತಂಡದವರು ಮುಂದಾಗಿದ್ದಾರೆ. 2023ರ ಚುನಾವಣೆ ಹೊತ್ತಿಗೆ ಸಿನಿಮಾ ರೆಡಿಯಾಗಿ ಅಭಿಮಾನಿಗಳನ್ನು ತಲುಪಲಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಈಗಾಗಲೇ ಸಿದ್ದರಾಮಯ್ಯ ನಿವಾಸದಲ್ಲಿ ಎರಡು ಬಾರಿ ಚರ್ಚೆ ಮಾಡಲಾಗಿದೆ. ನಿಮ್ಮ ಜೀವನದ ಕುರಿತಂತೆ ಸಿನಿಮಾ ಮಾಡುತ್ತೇವೆ ಎಂದು ಸಿದ್ದರಾಮಯ್ಯರ ಬಳಿ ಪ್ರಸ್ತಾಪ ಮಾಡಿದ್ದಾರೆ. ಈ ಸಿನಿಮಾವನ್ನು ಸುಮಾರು 20 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡುವ ಬಗ್ಗೆ ಸಿದ್ದರಾಮಯ್ಯ ಬೆಂಬಲಿಗ ಶಿವರಾಜ್ ತಂಗಡಗಿ ಯೋಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ