Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಖ್ಯಾತ ಯಕ್ಷಗಾನ ಕಲಾವಿದ ಮಾಜಿ ಶಾಸಕ ಕುಂಬಳೆ ಸುಂದರ್ ರಾವ್ ನಿಧನ

Kumbale sundar rao

 


ಮಂಗಳೂರು: ಯಕ್ಷರಂಗದ ಅಪ್ರತಿಮ ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್(88) ಅವರು ವಯೋಸಹಜ ಅನಾರೋಗ್ಯ ಕಾರಣದಿಂದ ವಿಧಿವಶರಾಗಿದ್ದಾರೆ.

1994 ರಿಂದ 1999 ರವರೆಗೆ ಸುರತ್ಕಲ್ ಕ್ಷೇತ್ರದಿಂದ ಹತ್ತನೇ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿದ್ದರು. ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಪಿ.ದಯಾನಂದ ಪೈ ಮತ್ತು ಪಿ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದಿಂದ 2018-2019ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಇವರಿಗೆ ಸಂದಿವೆ.

ಸುಂದರ್‌ ರಾವ್‌ ಅವರು, ಇಬ್ಬರು ಪುತ್ರರು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಗುರುವಾರ ನೆರವೇರಲಿದೆ.

ಮಂಗಳೂರು ಪಂಪ್ವೆಲ್ ಬಳಿ ಇರುವ ಅವರ ಮನೆಯಲ್ಲಿ ಸಾರ್ವಜನಿಕರಿಗೆ ವೀಕ್ಷಣೆಗೆ ಅವಕಾಶವಿದೆ. ಸುಂದರ್‌ ರಾವ್‌ ಅವರ ಅಗಲುವಿಕೆಗೆ ಯಕ್ಷಗಾನ ಕಲಾರಂಗದ ಇಡೀ ತಂಡ ತೀವ್ರ ಸ್ವಂತ ವ್ಯಕ್ತಪಡಿಸಿದೆ.





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo