ಬ್ರಹ್ಮಾವರ: ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ಆಕಾಶವಾಣಿ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನವೆಂಬರ್ 30 ರಂದು ರಾತ್ರಿ 9:00 ಗಂಟೆ ಸುಮಾರಿಗೆ ನಡೆದಿದೆ.
ಇನ್ನು ಮೃತರನ್ನು ಹಂದಾಡಿಯ ಇಂದು ಶೇಖರ್ ಎಂದು ಗುರುತಿಸಲಾಗಿದೆ. ಕುಂದಾಪುರದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ವೇಗದೂತ ಬಸ್ಸು ರಸ್ತೆ ದಾಟುತ್ತಿದ್ದ ಇಂದು ಶೇಖರ್ ಅವರಿಗೆ ಢಿಕ್ಕಿ ಹೊಡೆದ ಪರಿಣಾಮ ಅವರು ರಸ್ತೆಗೆ ಬಿದ್ದು ದೇಹದ ಭಾಗಗಳು ಚಿದ್ರವಾಗಿವೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ