ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಟ ಕಿಚ್ಚ ಸುದೀಪ್ ದಂಪತಿ ಸಮೇತ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿರುವ ನಟ ಸುದೀಪ್ ಹಾಗೂ ಪತ್ನಿ ಪ್ರಿಯಾ ಕಟೀಲಿನ ದುರ್ಗಾಪರಮೇಶ್ವರಿ ದೇಗುಲಕ್ಕೆ ಭೇಟಿ ನೀಡಿದರು. ಕಟೀಲು ಮತ್ತು ಮುಲ್ಕಿಯಲ್ಲಿ ಖಾಸಗಿ ಕಾರ್ಯಕ್ರಮವೊಂದಕ್ಕೆ ದಂಪತಿ ಆಗಮಿಸಿದ್ದಾರೆ.
ದೇವಸ್ಥಾನದ ವತಿಯಿಂದ ಸುದೀಪ್‌ಗೆ ಆತ್ಮೀಯ ಗೌರವ ಸಮರ್ಪಣೆ ಮಾಡಲಾಯಿತು. ಅಲ್ಲದೆ, ದುರ್ಗಾಪರಮೇಶ್ವರಿ ಫೋಟೊ ನೀಡಿ ಆಶೀರ್ವದಿಸಲಾಯಿತು. ಈ ಸಂದರ್ಭದಲ್ಲಿ ಸುದೀಪ್ ದಂಪತಿ ವಿಶೇಷ ಪೂಜೆ ನೆರವೇರಿಸಿ ಪ್ರಾರ್ಥನೆ ಸಲ್ಲಿಸಿದರು. ಖ್ಯಾತ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ