ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಎರ್ಮಾಯಿ ಫಾಲ್ಸ್ ಸಮೀಪದ ಏಳೂವರೆ ಹಳ್ಳದ ಕಲ್ಲಂಡ ಬಳಿ ಶನಿವಾರ ಸ್ನಾನಕ್ಕೆ ಇಳಿದಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಧರ್ಮಸ್ಥಳ ಗ್ರಾಮದ ದೊಂಡೋಲೆ ನಿವಾಸಿ ಕೇಶವ ಭಂಡಾರಿ ಅವರ ಪುತ್ರ, ಉಜಿರೆಯ ಪದವಿಪೂರ್ವ ಕಾಲೇಜೊಂದರ ವಿದ್ಯಾರ್ಥಿ ವಿವೇಕ್ (17) ಮೃತ ವಿದ್ಯಾರ್ಥಿ.
ಶನಿವಾರ ಮಧ್ಯಾಹ್ನ ನಂತರ ಕಾಲೇಜಿಗೆ ರಜೆ ಇದ್ದುದರಿಂದ ಆರೇಳು ಸ್ನೇಹಿತರ ಜೊತೆ ಎರ್ಮಾಯಿ ಫಾಲ್ಸ್‌ಗೆ ಹೋಗಿ, ತೊಟ್ಲಾಯಿ ಗುಂಡಿಯಲ್ಲಿ ಸ್ನಾನಕ್ಕೆ ಇಳಿದಿದ್ದ ಸಮಯ ಈ ಘಟನೆ ನಡೆದಿದೆ. ಮೃತದೇಹವನ್ನು ಮೇಲೆತ್ತಲು ಸ್ಥಳೀಯರು ಸಹಕರಿಸಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ