ಬೆಂಗಳೂರು : ಶಿವಮೊಗ್ಗದಲ್ಲಿ ಪಿಎಫ್ ಐ ಸೇರಿ ಎಂಬ ಪೋಸ್ಟರ್ ಗಳನ್ನು ಅಂಟಿಸಿರುವವರ ವಿರುದ್ಧ ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು.
ಪಿಎಫ್ಐ ರದ್ದು ಮಾಡಿದ ನಂತರ ಹತಾಶರಾಗಿ ಈ ರೀತಿ ಗೋಡೆ ಮೇಲೆ ಬರೆಯುವುದು ಮಾಡುವ ಕೆಲಸ ಮಾಡುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲ ಎಂದು ತಿಳಿಸಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ