Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು - ಸರ್ಕಾರದ ಮುಂದೆ ಪ್ರಸ್ತಾವನೆ ಇಲ್ಲ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Separate college for Muslim women - no proposal before government: Chief Minister Basavaraja Bommai


ವಕ್ಫ್ ಮಂಡಳಿ ವತಿಯಿಂದ ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯುವ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಕ್ಫ್ ಮಂಡಳಿ ಅಧ್ಯಕ್ಷರು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯುವ ಬಗ್ಗೆ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಇದು ಕೇವಲ ಹೇಳಿಕೆಯಾಗಿದ್ದು, ಈ ರೀತಿಯ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದರು.

ಹಿಜಾಬ್ ನಿರ್ಣಯದ ನಂತರ ಮುಸ್ಲಿಂ ಹೆಣ್ಣುಮಕ್ಕಳ ಹಾಜರಾತಿ ಕಡಿಮೆಯಾಗಿದೆ ಎಂಬುದಕ್ಕೆ ಪ್ರತಿಕ್ರಿಯಿಸಿ, ಇದು ಸತ್ಯಕ್ಕೆ ದೂರವಾಗಿದ್ದು, ವಿದ್ಯಾರ್ಥಿನಿಯರ ಹಾಜರಾತಿ ಸಂಪೂರ್ಣವಾಗಿದೆ. ರಾಜ್ಯದ ಸಾಕ್ಷರತಾ ದರ ಹೆಚ್ಚಾಗಿದ್ದು, ಅಲ್ಪಸಂಖ್ಯಾತ ಹೆಣ್ಣುಮಕ್ಕಳು ಆಸಕ್ತಿಯಿಂದ ವಿದ್ಯೆ ಕಲಿಯುತ್ತಿದ್ದಾರೆ. ಈ ವಿಷಯದಲ್ಲಿಯಾವುದೇ ಗೊಂದಲವಿಲ್ಲ ಎಂದು ತಿಳಿಸಿದರು .





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo