Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಮಂಗಳೂರು:-ಹೊಸ ವರ್ಷಾಚರಣೆ ಆಚರಣೆಗೆ ಅನುಮತಿ ಕಡ್ಡಾಯ; ಕಮಿಷನರ್ ನಿರ್ದೇಶನ

Mangalore:- Permission is mandatory for New Year celebration; Commissioner's direction

 


ಮಂಗಳೂರು:-ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ, 2023ರ ಹೊಸ ವರ್ಷಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ, ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳಿಗೆ ನೀಡಿರುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್‌ ಅವರು ನಿರ್ದೇಶಿಸಿದ್ದಾರೆ.

ಹೊಸ ವರ್ಷಾಚರಣೆಯನ್ನು ಆಚರಿಸುವ ನಗರದ ಎಲ್ಲಾ ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳ ಮಾಲಕರು, ವ್ಯವಸ್ಥಾಪಕರು, ಆಡಳಿತ ವರ್ಗದವರು ಈ ಬಗ್ಗೆ ಕಡ್ಡಾಯವಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಅರ್ಜಿ ಸಲ್ಲಿಸಿ ಪೂರ್ವಾನುಮತಿ ಪಡೆದುಕೊಳ್ಳಬೇಕು. ಡಿ. 31ರಂದು ರಾತ್ರಿ ಆರಂಭವಾಗುವ ಹೊಸ ವರ್ಷಾಚರಣೆಯ ಸಂತೋಷ ಕೂಟವನ್ನು ನಡೆಸಲು ಡಿಸೆಂಬರ್ 15ರ ಸಂಜೆ 5ಗಂಟೆಯೊಳಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಕಾರ್ಯಕ್ರಮಗಳ ಧ್ವನಿವರ್ಧಕವನ್ನು ರಾತ್ರಿ 10 ಗಂಟೆಯೊಳಗೆ ಒಳಾವರಣದಲ್ಲಿ ಮಾತ್ರ ಮುಕ್ತಾಯಗೊಳಿಸಬೇಕು. ಅಲ್ಲದೇ ಮದ್ಯವಿತರಣೆಗೆ ಅಬಕಾರಿಯಿಂದ ಅನುಮತಿ, ವಿದ್ಯಾರ್ಥಿಗಳಿಗೆ ಮದ್ಯಪಾನ ನಿಷೇಧ, ಬೈಕ್ ವೀಲಿಂಗ್ , ಹೆಣ್ಣುಮಕ್ಕಳನ್ನು, ಮಹಿಳೆಯರನ್ನು ಚುಡಾಯಿಸುವುದು, ಪಾರ್ಕಿಂಗ್ ವ್ಯವಸ್ಥೆ, ಹೊಸ ವರ್ಷಾಚರಣೆ ಸಂದರ್ಭ ಸಾಂಸ್ಕೃತಿಕ ಕಾರ್ಯಕ್ರಮಗಳ ನೆಪದಲ್ಲಿ ಅಶ್ಲೀಲ, ಅರೆಬೆತ್ತಲೆ ಅಥವಾ ಅಶ್ಲೀಲ ನೃತ್ಯ, ಜೂಜಾಟ ನಡೆಸುವುದನ್ನೂ ನಿಷೇಧಿಸಲಾಗಿದೆ. ಹೊಸ ವರ್ಷಾಚರಣೆಯ ಕಾರ್ಯಕ್ರಮಗಳನ್ನು ಆಯೋಜಿಸುವವರು ತುರ್ತು ಪರಿಸ್ಥಿತಿಯನ್ನು ಎದುರಿಸಲು ಅಗ್ನಿಶಾಮಕ ಉಪಕರಣಗಳು, ತುರ್ತು ಚಿಕಿತ್ಸಾ ವಾಹನ ಹಾಗೂ ಇತರ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದೂ ತಿಳಿಸಿದ್ದಾರೆ.






0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo