ಧಾರವಾಡ: ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಗೆ ಹೃದಯಾಘಾವಾಗಿ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನಪ್ಪಿರುವ ಘಟನೆ ಜಿಲ್ಲೆಯ ಕಲಘಟಗಿ ಪಟ್ಟಣದಲ್ಲಿ ಗುರುವಾರದಂದು ನಡೆದಿದೆ.
ಕಲಘಟಗಿ ಪಟ್ಟಣದ ಸರ್ಕಾರಿ ಕಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆಯ ಮಕ್ತುಮ್ ಮಹ್ಮದರಫಿ ಮನಿಯಾರ್ (13) ಮೃತಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಇನ್ನೂ ವಿದ್ಯಾರ್ಥಿ ಮುಕ್ತುಮ್ ತರಗತಿ ನಡೆಯುವ ವೇಳೆ ಶಾಲೆಯಲ್ಲಿ ಕ್ಲಾಸ್ ರೂಮನಲ್ಲಿ ಕುಸಿದು ಬಿದಿದ್ದಾನೆ. ತಕ್ಷಣವೇ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಗಳು ವಿದ್ಯಾರ್ಥಿನಿಯನ್ನು ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಿ, ವಿದ್ಯಾರ್ಥಿ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಉಸಿರು ಚೆಲ್ಲಿದ್ದಾನೆ.
ಕೆಲ ವರ್ಷಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ವಿದ್ಯಾರ್ಥಿ ಬಳಲುತ್ತಿದ್ದ ಎಂದು ಹೇಳಲಾಗುತ್ತಿದೆ. ಇನ್ನೂ ಮೃತ ವಿದ್ಯಾರ್ಥಿಗೆ ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸೇರಿದಂತೆ ಹಲವರು ಸಂತಾಪವನ್ನು ಸೂಚಿಸಿ ಭಾವಪೂರ್ಣ ನಮನವನ್ನು ಸಲ್ಲಿಸಿ ಮೃತ ವಿದ್ಯಾರ್ಥಿ ಆತ್ಮಕ್ಕೆ ಶಾಂತಿ ಕೋರಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ