ಉಡುಪಿ: ಸ್ಕೂಟರ್‌ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸಹಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್ ನಲ್ಲಿ ಶುಕ್ರವಾರ ನಡೆದಿದೆ.
ಮೃತರನ್ನು ಉದ್ಯಾವರ ಬೊಳ್ಜೆಯ ಮೂಲದ ಸುಶಿಕ್ಷಿತ್ (20) ಎಂದು ಗುರುತಿಸಲಾಗಿದೆ.
ಸುಶಿಕ್ಷಿತ್ ತನ್ನ ಗೆಳೆಯ ಜಯದೀಪ್ ಜೊತೆಗೆ ಕೆಟರೀಂಗ್ ಕೆಲಸಕ್ಕಾಗಿ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಲಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಸುಶಿಕ್ಷಿತ್ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಅಫಘಾತದಿಂದ ಗಾಯಗೊಂಡ ಬೈಕ್ ಸವಾರ ಜಯದೀಪ್ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ