ನರೇಂದ್ರ ಮೋದಿಯವರು ದೇಶದ್ರೋಹಿಗಳಿಗೆ ಭಸ್ಮಾಸುರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿಕೆ ನೀಡಿದ್ದಾರೆ.
ಇಂದು ಬಿಜೆಪಿ ರಾಜ್ಯ ಕಾರ್ಯಾಲಯ 'ಜಗನ್ನಾಥ ಭವನ'ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರ ಕೊಟ್ಟ, ಅವರು, ಗುಜರಾತ್ ನಲ್ಲಿ ಟೀಕಿಸುವ ಯಾವುದೇ ಸರಕಿಲ್ಲದೆ ಜನರ ಹೃದಯ ಸಾಮ್ರಾಟರಾದ ಪ್ರಧಾನಿ ನರೇಂದ್ರ ಮೋದಿಯವರನ್ನು ರಾವಣ ಎಂದಿದ್ದಾರೆ. ರಾಮಮಂದಿರ ನಿರ್ಮಿಸುವವರು ರಾವಣ ಆಗುವುದು ಹೇಗೆ? ದಿನಕ್ಕೊಂದು ಬಣ್ಣ ಬದಲಿಸುವವರು, ರಾಮನನ್ನು ಕಾಲ್ಪನಿಕ ವ್ಯಕ್ತಿ ಎಂದು ಅಫಿದವಿಟ್ ಕೊಟ್ಟ ಕಾಂಗ್ರೆಸ್ ಪಕ್ಷ ರಾವಣ ಮನಸ್ಥಿತಿ ಹೊಂದಿದೆ. ಕರಸೇವಕರ ಮೇಲೆ ಗೋಲಿಬಾರ್ ಮಾಡಿ ಹತ್ಯೆ ಮಾಡಿದವರು, ಗೋದ್ರಾ ಹತ್ಯಾಕಾಂಡ ಮಾಡಿದವರು, ಅದನ್ನು ಬೆಂಬಲಿಸಿದವರು ರಾವಣನ ಬೆಂಬಲಿಗರು ಎಂದು ಆಕ್ಷೇಪಿಸಿದರು. ದೇಶವನ್ನು ರಕ್ಷಿಸುವ ಹಾಗೂ ಜನರನ್ನು ಬದುಕಿಸಿದ ವಿಚಾರದಲ್ಲಿ ಮೋದೀಜಿ ಅವರು ಶ್ರೀಮನ್ನಾರಾಯಣ ಎಂದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ