ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿ ಸುದ್ದಿಗೆ ಗ್ರಾಸವಾಗಿದ್ದ ಶ್ರೀರಾಮ ಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಇದೀಗ ತಾವು ಸ್ಪರ್ಧಿಸುವ ಕ್ಷೇತ್ರದ ಕುರಿತು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕಾರ್ಕಳ: ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿ ಸುದ್ದಿಗೆ ಗ್ರಾಸವಾಗಿದ್ದ ಶ್ರೀರಾಮ ಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಇದೀಗ ತಾವು ಸ್ಪರ್ಧಿಸುವ ಕ್ಷೇತ್ರದ ಕುರಿತು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಾಗಿ ಪ್ರಮೋದ್ ಮುತಾಲಿಕ್ ಅವರು ಘೋಷಣೆ ಮಾಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಮುತಾಲಿಕ್ ಅವರು, ಯಾವುದೇ ಕಾರಣಕ್ಕೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ. ಯಾರು ಏನೇ ಒತ್ತಡ ಹಾಕಿದರೂ ಕಾರ್ಕಳ ಕ್ಷೇತ್ರದಲ್ಲೇ ಸ್ಪರ್ಧೆ ಮಾಡುವುದು ನಿಶ್ಚಿತ. ಸಾವಿರಾರು ಕಾರ್ಯಕರ್ತರ ನೋವಿನ ಧ್ವನಿಯಾಗಿ, ಅವರ ಒತ್ತಡದಿಂದ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದರು.
ನಾನು ಬಿಜೆಪಿ ವಿರೋಧಿಯಲ್ಲ. ನಾನು ಮೋದಿ ಪರವಾಗಿ ಹಿಂದುತ್ವದ ಪರವಾಗಿದ್ದೇನೆ, ಗೆದ್ದ ನಂತರವೂ ನನ್ನ ಬೆಂಬಲ ಬಿಜೆಪಿಗೆ ಇರಲಿದೆ. ನನ್ನ ಸ್ಪರ್ಧೆ ಏನಿದ್ದರೂ ವ್ಯಕ್ತಿಗಳ ವಿರುದ್ಧ, ಭ್ರಷ್ಟರ ವಿರುದ್ದ, ಹಿಂದು ವಿರೋಧಿಗಳ ವಿರುದ್ಧವಾಗಿದೆ ಎಂದು ತಿಳಿಸಿದ್ದಾರೆ. ಪ್ರಮೋದ್ ಮುತಾಲಿಕ್ ಅವರ ಈ ಘೋಷಣೆಯಿಂದ ಕಾರ್ಕಳ ವಿಧಾನಸಭೆ ಚುನಾವಣಾ ಕಣ ರಂಗೇರಿದೆ. ಇದರಂತೆ ಇಂಧನ ಸಚಿವ ವಿ ಸುನೀಲ್ ಕುಮಾರ್ ಅವರ ಕ್ಷೇತ್ರದಲ್ಲಿ ಇದೀಗ ತ್ರಿಕೋನ ಸ್ಪರ್ಧೆ ಏರ್ಪಟ್ಟಂತಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ