ಮಂಗಳೂರು: ತುಳುನಾಡ ಮಾಣಿಕ್ಯ ಎಂದೇ ಖ್ಯಾತರಾಗಿರುವ ಹಾಸ್ಯನಟ, ಕಲಾವಿದ ಅರವಿಂದ ಬೋಳಾರ್ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನವೊಂದು ನಗರದ ಪಂಪ್‌ವೆಲ್ ಬಳಿ ಇಂದು ಸ್ಕಿಡ್ಡಾಗಿ ಉರುಳಿದಿರುವುದಾಗಿ ಎಂದು ತಿಳಿದು ಬಂದಿದೆ.
ಅತೀ ವೇಗವಾಗಿ ಚಲಿಸಿಕೊಂಡು ಬರುತ್ತಿದ್ದ ಬಸ್ಸೊಂದು ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಸಲುವಾಗಿ ಅರವಿಂದ್ ಬೋಳಾರ್ ತಾನು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನದ ಬ್ರೇಕ್ ಹಾಕಿದ್ದು, ಈ ಸಂದರ್ಭ ಸ್ಕಿಡ್ಡಾಗಿ ಬಿದ್ದ ಪರಿಣಾಮ ಅರವಿಂದ ಬೋಳಾರ್‌ಗೆ ಗಾಯವಾಗಿದೆ. ಅರವಿಂದ ಬೋಳಾರ್‌ರ ಕಾಲಿಗೆ ಗಾಯವಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳವಾರ ಅರವಿಂದ್ ಬೋಳಾರ್‌ರ ಕಾಲಿನ ಶಸ್ತ್ರಚಿಕಿತ್ಸೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ