Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ:-ಸಿಎಂ ಬೊಮ್ಮಾಯಿ ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ

Udupifirst-udupinews-

 


ಉಡುಪಿ: ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಅವರು ಟೆಂಪಲ್​ ರನ್​ ಶುರು ಮಾಡಿದ್ದಾರೆ. ಇಂದು ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಸಿಎಂ ಬೊಮ್ಮಾಯಿ ಅವರಿದ್ದ ಹೆಲಿಕಾಪ್ಟರ್​ ಲ್ಯಾಂಡ್​ ಆಗಬೇಕಿದ್ದ ಹೆಲಿಪ್ಯಾಡ್​ ಬಳಿ ಬೆಂಕಿ ಕಾಣಿಸಿಕೊಂಡು ಕೆಲ ಕಾಲ ಆತಂಕದ ವಾತಾವರಣ ಉಂಟಾಯಿತು.

ಉಡುಪಿಯ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್​ ಬಳಿ ಸಿಎಂ ಬೊಮ್ಮಾಯಿ ಅವರ ಬೆಂಗಾವಲು ಪಡೆ ವಾಹನ ತೆರಳಿದ ಬಳಿಕ ಹೆಲಿಪ್ಯಾಡ್​ನಲ್ಲಿ ಬೆಂಕಿ ಕಾಣಿಸಿಕೊಂಡಿತು. ತಕ್ಷಣ ಕಾರ್ಯಪ್ರವೃತ್ತರಾದ ಬೈಂದೂರು ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವ ಮೂಲಕ ಅನಾಹುತವನ್ನು ತಪ್ಪಿಸಿದರು.

ಈ ಅವಘಡದಿಂದ ಸಿಎಂ ಬೊಮ್ಮಾಯಿ ಅವರು ಬಚಾವ್​ ಆಗಿದ್ದಾರೆ. ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದಲ್ಲಿ ಸಿಎಂ ಬೊಮ್ಮಾಯಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಚುನಾವಣೆ ಸಮೀಪಿಸುತ್ತಿದ್ದು, ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರುವ ಬಯಕೆ ಹೊಂದಿರುವ ಬಸವರಾಜ ಬೊಮ್ಮಾಯಿ ದೇವರ ಮೊರೆ ಹೋಗಿದ್ದಾರೆ.

ದೇವಸ್ಥಾನಕ್ಕೆ ಸಿಎಂ ಭೇಟಿಯ ವೇಳೆ ನಟ ರಿಷಬ್ ಶೆಟ್ಟಿ ಕೂಡ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಕುತೂಹಲ ಕೆರಳಿಸಿತು. ಆದರೆ, ಇದು ಆಕಸ್ಮಿಕ ಭೇಟಿ ಆಗಿದೆ. ಸಿಎಂ ಬೊಮ್ಮಾಯಿ ಅವರನ್ನು ನೋಡುತ್ತಿದ್ದಂತೆ ಅವರ ಬಳಿ ಹೋಗಿ ನಟ ರಿಷಬ್, ಕಾಲು ಮುಟ್ಟಿ ಆಶೀರ್ವಾದ ಪಡೆದರು. ಈ ವೇಳೆ ರಿಷಬ್ ಅವರ ಬೆನ್ನನ್ನು ತಟ್ಟಿ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದರು.





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo