ಬೆಂಗಳೂರು: ಬಿಜೆಪಿಯ ಮಾಜಿ ನಾಯಕ ಜಗದೀಶ ಶೆಟ್ಟರ ಅವರು ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಕಚೇರಿಗೆ ಆಗಮಿಸಿದ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶೆಟ್ಟರ ಅವರಿಗೆ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಶಾಲು ಹೊದಿಸಿ, ಬಾವುಟ ನೀಡಿ ಪಕ್ಷಕ್ಕೆ ಸ್ವಾಗತಿಸಿದರು.
ನಂತರ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಕಾಂಗ್ರೆಸ್ ಪಕ್ಷದ ಸಿದ್ದಾಂತ ಶೆಟ್ಟರಗೆ ಗೊತ್ತಿದೆ. ನಮ್ಮ ಪಕ್ಷದ ಸಿದ್ದಾಂತ ಒಪ್ಪಿದ, ತಮ್ಮ ಸ್ವಾಭಿಮಾನ ಕಾಪಾಡಲು ಅವರು ಈ ನಿರ್ಧಾರವನ್ನು ಕೈಗೊಂಡಿದ್ದಾರೆ. ಅವರು ಗೆಲ್ಲುವ ಜೊತೆಗೆ, ಶೆಟ್ಟರ್ ಪಕ್ಷಕ್ಕೆ ಬರುವುದರಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಶಕ್ತಿ ಸಿಗಲಿದೆ ಎಂದು ಹೇಳಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ