ಉಡುಪಿ: ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆ ರಂಗೇರಿದ್ದು, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಉಡುಪಿಗೆ ಭೇಟಿ ನೀಡಿದರು. ದಿಲ್ಲಿಯಿಂದ ಹೊರಟು ಶಿವಮೊಗ್ಗ ಆಗಮಿಸಿ ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ ಆದಿ ಉಡುಪಿ ಹೆಲಿಪ್ಯಾಡ್‌ಗೆ ಬಂದಿಳಿದರು.
ಜಿಲ್ಲೆಗೆ ಆಗಮಿಸಿದ ರಾಹುಲ್ ಗಾಂಧಿಯನ್ನು ಜಿಲ್ಲಾ ಕಾಂಗ್ರೆಸ್ ಮುಖಂಡರು ಅದ್ಧೂರಿಯಾಗಿ ಸ್ವಾಗತಿಸಿಕೊಂಡರು. ಕಾಪು ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿದ ರಾಹುಲ್ ಗಾಂಧಿ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನಕ್ಕೆ ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ರಾಹುಲ್ ಗಾಂಧಿ ಅವರನ್ನು ದೇವಾಲಯ ಆಡಳಿತ ಮಂಡಳಿ ಹೂವಿನ ಹಾರ ಹಾಕಿ, ಶಾಲು ಹೊದಿಸಿ ಗೌರವಿಸಿದ್ದಾರೆ.
ಬಳಿಕ ರಾಹುಲ್ ಗಾಂಧಿ ಕರಾವಳಿಯ ಮುಖ್ಯ ಕಸುಬಾದ ಮೀನುಗಾರಿಕೆ ಬಗ್ಗೆ ಮೀನುಗಾರ ಮಹಿಳೆಯರು, ಕಾರ್ಮಿಕರ ಜೊತೆಗೆ ಸಂವಾದ ನಡೆಸಿ ಸಮಸ್ಯೆ ಆಲಿಸಿದ್ದಾರೆ. ದೇವಸ್ಥಾನ ಆವರಣದ ಸಭಾಂಗಣದಲ್ಲಿ ಎರಡು ಸಾವಿರದಷ್ಟು ಮೀನುಗಾರ ಪ್ರತಿನಿಧಿಗಳ ಜೊತೆ ರಾಹುಲ್ ಸಂವಾದ ನಡೆಸಿದರು. ಮೀನುಗಾರ ಮಹಿಳೆಯರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದುಲ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಕನ್ನಡ- ಇಂಗ್ಲಿಷ್‌ನಲ್ಲಿ ವ್ಯವಹರಿಸಿ ಮೀನುಗಾರರ ಸಮಸ್ಯೆಯನ್ನು ರಾಹುಲ್ ಗಾಂಧಿಗೆ ವಿವರಿಸಿದರು.
ಮೀನುಗಾರರಿಗೆ ನೀಡುತ್ತಿರುವ ಸಾಲ ಸಬ್ಸಿಡಿಯನ್ನು ಐದು ಲಕ್ಷಕ್ಕೆ ಏರಿಸಬೇಕೆಂದು ಮೀನುಗಾರ ಮಹಿಳೆಯೊಬ್ಬರು ಬೇಡಿಕೆಯನ್ನು ರಾಹುಲ್ ಗಾಂಧಿ ಮುಂದಿಟ್ಟರು. ಕೇಂದ್ರದಲ್ಲಿ ಯುಪಿಎ ಸರಕಾರ ಅಧಿಕಾರಕ್ಕೆ ಬಂದಲ್ಲಿ ನಿಮ್ಮೆಲ್ಲಾ ಸಮಸ್ಯೆಯನ್ನು ಬಗೆ ಹರಿಸುತ್ತೇವೆ ಎಂದು ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ. ಸಂವಾದದಲ್ಲಿ ಮಂಗಳೂರು, ಉಡುಪಿ, ಬೈಂದೂರು ತಾಲೂಕಿನ ಮೀನುಗಾರ ಪ್ರತಿನಿಧಿಗಳು ಭಾಗವಹಿಸಿದ್ದರು.
ಮೀನುಗಾರರ ಸಂವಾದದ ಬಳಿಕ ವೇದಿಕೆಯಲ್ಲಿ ಮೀನುಗಾರ ಮಹಿಳೆಯೊಬ್ಬರು ರಾಹುಲ್ ಗಾಂಧಿಗೆ ಅಂಜಲ್ ಮೀನು ಗಿಫ್ಟ್ ನೀಡಿದ್ದಾರೆ. ಮಹಿಳೆ ನೀಡಿದ ಉಡುಗೊರೆಯನ್ನು ಪಡೆದ ರಾಹುಲ್ ಗಾಂಧಿ ವೇದಿಕೆಯಲ್ಲಿ ತಮ್ಮೊಂದಿಗಿದ್ದ ಕಾಂಗ್ರೆಸ್ ಮುಖಂಡ ಪ್ರತಾಪ್ ಅವರಿಗೆ ಅಂಜಲ್ ಮೀನು ಹಸ್ತಾಂತರ ಮಾಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ