ಉಡುಪಿ:- ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಈ ಮಧ್ಯೆ ಚುನಾವಣೆಯಲ್ಲಿ ಅತೀ ಕುತೂಹಲ ಕೆರಳಿಸಿರುವ ಕರಾವಳಿ ಕ್ಷೇತ್ರಗಳಿಗೆ ಇದೀಗ ಪ್ರಧಾನಿ ಮೋದಿ ಅವರು ಭೇಟಿ ನೀಡಿ ಪ್ರಚಾರ ನಡೆಸುವ ಸಾಧ್ಯತೆಯಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಪ್ರಧಾನಿ ಮೋದಿ ಮೇ 4ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಿ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.ಮೇ 4ರಂದು ಉಡುಪಿ ಜಿಲ್ಲಾ ಕೇಂದ್ರ ಅಥವಾ ಸೂಕ್ತ ಪ್ರದೇಶದಲ್ಲಿ ಸಮಾವೇಶ ನಡೆಯುವ ಸಾಧ್ಯತೆ ಇದೆ.
ಪ್ರಧಾನಿ ಜಿಲ್ಲೆಗೆ ಭೇಟಿ ನೀಡಲಿರುವ ಬಗ್ಗೆ ಕೇಂದ್ರದ ನಾಯಕರು ಜಿಲ್ಲಾ ಪ್ರಮುಖರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಅನುಕೂಲ ಆಗುವಂತೆ ಸೂಕ್ತ ಪ್ರದೇಶದಲ್ಲಿ ಮೇ 4ರಂದು ಪ್ರಧಾನ ಮೋದಿ ಸಮಾವೇಶ ನಡೆಯಲಿದೆ. ಈ ಬಗ್ಗೆ ಕೇಂದ್ರ ನಾಯಕರು ಮಾಹಿತಿ ನೀಡಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ