ರಾಜ್ಯದ ಕರಾವಳಿ ಭಾಗದಲ್ಲಿ ಮಳೆ ಮುಂದುವರಿದಿದ್ದು, ಏ.14ರಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ. ಇನ್ನು ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ.
ಬೆಂಗಳೂರು ನಗರದಲ್ಲಿ ಯಾವುದೇ ಮಳೆ ಮುನ್ಸೂಚನೆ ಇಲ್ಲ. ಗರಿಷ್ಠ ಉಷ್ಣಾಂಶ 35 ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬುಧವಾರ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 40.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಗದಗ, ಹಾವೇರಿ ಹಾಗೂ ಧಾರವಾಡ, ಬಾಗಲಕೋಟೆ, ಕಲಬುರಗಿ, ವಿಜಯಪುರದಲ್ಲಿ ಶನಿವಾರದಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಹಾಗೂ ಚಿಕ್ಕಮಗಳೂರು, ಹಾಸನ, ಕೊಡಗಿನ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ